23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನೀಡಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಫೆ.5ರಂದು ವಿಚಾರಣೆ ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಫೆ.13ಕ್ಕೆ ಮುಂದೂಡಲಾಗಿದೆ.

ಪ್ರಕರಣದಲ್ಲಿ ಎಸ್‌ಐಟಿ ವರದಿ ಸಲ್ಲಿಕೆಯಾದ ಬೆನ್ನಲ್ಲಿಯೇ ಶ್ರೀ ಕ್ಷೇತ್ರ ಧರ್ಮಸ್ಥಳ ಪರವಾಗಿ ನ್ಯಾಯವಾದಿಗಳು ಅರ್ಜಿ ಸಲ್ಲಿಸಿ ಪ್ರಕರಣದಲ್ಲಿ ಧರ್ಮಸ್ಥಳದವರು ಸಂತ್ರಸ್ಥರಾಗಿದ್ದು, ತಮಗೂ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದರು. ಇದೇ ವಿಚಾರದಲ್ಲಿ ನ್ಯಾಯಾಲಯದಲ್ಲಿ ವಾದ ವಿವಾದ ನಡೆಯಿತು. ಧರ್ಮಸ್ಥಳ ಪರವಾಗಿ ಹೈಕೋರ್ಟ್ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ್ ಅವರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನ್ಯಾಯಾಧೀಶರ ಮುಂದೆ ವಾದ ಮಂಡಿಸಿದರು. ಎಸ್‌ಐಟಿ ಪರ ವಕೀಲರು ಧರ್ಮಸ್ಥಳವನ್ನು ಪ್ರಕರಣದಲ್ಲಿ ಭಾಗಿಯಾಗಲು ಅವಕಾಶ ಕೇಳಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಿರುವುದಾಗಿ ತಿಳಿದು ಬಂದಿದೆ.

ಫೆ.13ಕ್ಕೆ ವಿಚಾರಣೆ: ಈಗಾಗಲೇ ಮಹೇಶ್ ಶೆಟ್ಟಿ ಹಾಗೂ ಇತರರ ಪರವಾಗಿ ಹಾಜರಾಗುತ್ತಿರುವ ನ್ಯಾಯವಾದಿಗಳು ಧರ್ಮಸ್ಥಳದವರನ್ನು ಈ ಪ್ರಕರಣದಲ್ಲಿ ಕಕ್ಷಿದಾರರಾಗಿಸುವುದಕ್ಕೆ ಆಕ್ಷೇಪಣೆ ಸಲ್ಲಿಸಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಫೆ.13 ಕ್ಕೆ ಮುಂದೂಡಿದ್ದು, ಅಂದು ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು ವಾದ ಮಂಡಿಸಲಿದ್ದಾರೆ. ಎಸ್ಐಟಿ ಪರ ವಕೀಲರೂ ಆಕ್ಷೇಪಣೆ ಹಾಕಿರುವ ಹಿನ್ನೆಲೆಯಲ್ಲಿ ಅವರೂ ಈ ಬಗ್ಗೆ ವಾದ ಮಂಡಿಸಲಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ: ಸಾಕ್ಷಿ ದೂರುದಾರನಾಗಿ ಬಂದು ಜೈಲು ಸೇರಿ ಇದೀಗ ಜಾಮೀನಿನ ಮೇಲೆ ಹೊರ ಬಂದಿರುವ ಚಿನ್ನಯ್ಯ ಹಾಗೂ ಆತನ ಪತ್ನಿ ಫೆ.5ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರನ್ನು ಪ್ರಕರಣದಲ್ಲಿ ಭಾಗಿಗಳಾಗಲು ಅವಕಾಶ ನೀಡುವುದಕ್ಕೆ ತಮ್ಮ ಆಕ್ಷೇಪಣೆ ಇಲ್ಲ ಎಂದು ನ್ಯಾಯಾಲಯದ ಮುಂದೆ ಚಿನ್ನಯ್ಯನ ಪರ ವಕೀಲರು ತಿಳಿಸಿರುವುದಾಗಿ ತಿಳಿದು ಬಂದಿದೆ.

Related posts

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya
error: Content is protected !!