24.8 C
ಪುತ್ತೂರು, ಬೆಳ್ತಂಗಡಿ
March 7, 2026
ಬೆಳ್ತಂಗಡಿವರದಿ

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

ಬೆಳ್ತಂಗಡಿ: ದೇಶದಲ್ಲಿ ಶೋಷಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಧ್ವನಿಯಾಗಿ ನಿರಂತರ ಹೋರಾಟ ನಡೆಸುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷವು ಫೆ.10 ರಿಂದ ಮಾರ್ಚ್ 10 ರವರೆಗೆ ಎಸ್‌ಡಿಪಿಐ ಸೇರೋಣ ಜನ ಸಾಮಾನ್ಯರ ಧ್ವನಿಗೆ ಶಕ್ತಿ ನೀಡೋಣ ಎಂಬ ಘೋಷ ವಾಕ್ಯದೊಂದಿಗೆ ಬೃಹತ್ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2009ರಲ್ಲಿ ಪಕ್ಷ ಸ್ಥಾಪನೆಯಾದ ದಿನದಿಂದಲೂ ಎಸ್‌ಡಿಪಿಐ ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡದೆ, ಜನರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ,ಫ್ಯಾಶಿಸಂ ವಿರುದ್ಧವಾಗಿ ರಾಜಿಯಿಲ್ಲದ ಹೋರಾಟ ನಡೆಸುತ್ತಾ ಬಂದಿದೆ. ಹಸಿವು ಮುಕ್ತ ಮತ್ತು ಭಯ ಮುಕ್ತ ಸಮಾಜದ ನಿರ್ಮಾಣವೇ ಪಕ್ಷದ ಮುಖ್ಯ ಗುರಿಯಾಗಿದ್ದು, ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಜನಸಾಮಾನ್ಯರನ್ನು ಸಂಘಟಿಸುವಲ್ಲಿ ಪಕ್ಷವು ಮುಂಚೂಣಿಯಲ್ಲಿದೆ.

ಸಂವಿಧಾನ ಪ್ರೇಮಿಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿರುವ ನವಾಝ್ ಕಟ್ಟೆ ಅವರು, “ವ್ಯವಸ್ಥೆಯ ಬದಲಾವಣೆಗಾಗಿ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಇಂದಿನ ಕಾಲಘಟ್ಟದಲ್ಲಿ ಸಂಘಟಿತ ಶಕ್ತಿ ಅನಿವಾರ್ಯವಾಗಿದೆ. ಆದ್ದರಿಂದ ಸಂವಿಧಾನ ಪ್ರಿಯ ನಾಗರಿಕರು, ವಿಶೇಷವಾಗಿ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಡಿಪಿಐ ಸದಸ್ಯತ್ವ ಪಡೆಯುವ ಮೂಲಕ ಜನಪರ ಹೋರಾಟಕ್ಕೆ ಬಲ ತುಂಬಬೇಕು” ಎಂದು ಕೋರಿದ್ದಾರೆ.ಫೆಬ್ರವರಿ 10 ರಂದು ಜಿಲ್ಲೆಯಾಧ್ಯಂತ ಆರಂಭಗೊಳ್ಳಲಿರುವ ಸದಸ್ಯತ್ವ ಅಭಿಯಾನದಲ್ಲಿ ನಮ್ಮ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ಹೊಸ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya
error: Content is protected !!