23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

ಬೆಳ್ತಂಗಡಿ: ರಾಜ್ಯದ ಖ್ಯಾತ ಪತ್ರಕರ್ತರಾದ ವಸಂತ ಗಿಳಿಯಾರ್ ರವರು ಫೆ.೫ರಂದು ಸಿರಿ ಕೇಂದ್ರ ಕಛೇರಿಗೆ ಭೇಟಿ ನೀಡಿದರು.

ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಂಸ್ಥೆಯಲ್ಲಿ ನಡೆಯುತ್ತಿರುವ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ ಸಿರಿ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತದನಂತರ ಸಿರಿ ಸಿಬ್ಬಂದಿಗಳನ್ನುದ್ದೇಶಿಸಿ ಅವರು ಮಾತನಾಡಿ, ಸಿರಿ ಎಂದರೆ ಲಕ್ಷ್ಮೀ, ಸಂಪತ್ತು, ಸಿರಿ ಎಂಬ ಹೆಸರೇ ಬಹಳ ಅರ್ಥಪೂರ್ಣವಾಗಿದ್ದು, ಬೆಳ್ತಂಗಡಿಯಂತಹ ಒಂದು ಸಣ್ಣ ಹಳ್ಳಿಯಲ್ಲಿ ಸುಮಾರು ನೂರು ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಈ ಭವ್ಯ ಕಟ್ಟಡದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಮೆಷಿನರಿಗಳನ್ನು ಅಳವಡಿಸುವ ಜೊತೆಗೆ, ಇಲ್ಲಿ ದುಡಿಯುವ ಸಾವಿರಾರು ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಐಟಿ-ಬಿಟಿ ಕಂಪನಿಗಳನ್ನೇ ಮೀರಿಸುವಂತಹ ಈ ಸಿರಿ ಸಂಸ್ಥೆಯನ್ನು ಪೂಜ್ಯರು ಮಾತೃಶ್ರೀ ಅಮ್ಮನವರು ಕಟ್ಟಿ ಬೆಳೆಸಿದ್ದಾರೆ. ಇದು ಬಹಳ ಸಂತಸಪಡುವಂತಹ ವಿಚಾರ ಎಂದು ಹೆಮ್ಮೆಯಿಂದ ನುಡಿದರು.

ಪೂಜ್ಯ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತೀ ಅಮ್ಮನವರ ಬೆನ್ನೆಲುಬಾಗಿ ನಿಲ್ಲುವ ಮೂಲಕ ಎಲ್ಲಾ ಸಿರಿ ಸಿಬ್ಬಂದಿಗಳು ಒಗ್ಗಟ್ಟಾಗಿ ಶ್ರಮವಹಿಸಿ ದುಡಿದು ಉತ್ತಮ ಗುಣಮಟ್ಟವನ್ನು ಹೊಂದಿರುವ ಈ ಸಿರಿ ಬ್ರ್ಯಾಂಡ್‌ನ್ನು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿದು, ಗ್ರಾಮೀಣ ಮಹಿಳೆಯರ ಸಬಲೀಕರಣ ಧ್ಯೇಯೋದ್ದೇಶವನ್ನು ಹೊಂದಿರುವ ಪೂಜ್ಯ ದಂಪತಿಗಳು ಹೊತ್ತ ಕನಸನ್ನು ನನಸು ಮಾಡೋಣ ಎಂದು ಸಿರಿ ಸಿಬ್ಬಂದಿಗಳನ್ನು ಹುರಿದುಂಬಿಸಿದರು. ಇದರ ನೇತೃತ್ವವನ್ನು ವಹಿಸಿ, ಸಿರಿ ಸಂಸ್ಥೆಯ ಏಳಿಗೆಗಾಗಿ ಅವಿರತ ಶ್ರಮಿಸುತ್ತಿರುವ ಸಿರಿ ಎಂ.ಡಿ ಕೆ.ಎನ್ ಜನಾರ್ಧನರವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಜನಸೇವಾ ಟ್ರಸ್ಟ್ ಗಿಳಿಯಾರು ಇವರ ವತಿಯಿಂದ ಸಿರಿ ಸಂಸ್ಥೆಯ ಸಹ ಪ್ರಾಯೋಜಕತ್ವದಲ್ಲಿ ಫೆ.೧೪ರಂದು ಬ್ರಹ್ಮಾವರದಲ್ಲಿ ನಡೆಯಲಿರುವ ಅಭಿಮತ ಸಂಭ್ರಮ ಕಾರ್ಯಕ್ರಮಕ್ಕೆ ಎಲ್ಲಾ ಸಿರಿ ಸಿಬ್ಬಂದಿಗಳನ್ನೂ ಆಹ್ವಾನಿಸಿದ ವಸಂತ ಗಿಳಿಯಾರ್ ರವರು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಹಸ್ರಾರು ಜನರಿಗೆ ಸಿರಿ ಉತ್ಪನ್ನಗಳನ್ನು ಪರಿಚಯಿಸಿ, ಸಿರಿ ಉತ್ಪನ್ನಗಳ ಬಗ್ಗೆ ಉಪಯುಕ್ತ ಮಾಹಿತಿಯನ್ನು ಹಂಚುವ ಮೂಲಕ ಸಿರಿಯ ಸಮಗ್ರ ಅಭಿವೃದ್ಧಿಗೆ ಕೈಜೋಡಿಸುವುದಾಗಿ ಭರವಸೆ ನೀಡಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರು ವಸಂತ ಗಿಳಿಯಾರ್ ರವರನ್ನು ಸ್ವಾಗತಿಸಿ, ಸಿರಿ ಸಿಬ್ಬಂದಿಗಳ ಪರವಾಗಿ ಗೌರವಾರ್ಪಣೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ, ವಿವಿಧ ವಿಭಾಗಗಳ ಮೇಲಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಿರಿ ಗೋದಾಮು ಮೇಲ್ವಿಚಾರಕ ಜೀವನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಧನ್ಯವಾದ ಸಲ್ಲಿಸಿದರು.

Related posts

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya
error: Content is protected !!