23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು, ಇಲ್ಲಿನ ಪದವಿ ಪೂರ್ವ ವಿಭಾಗದಲ್ಲಿ ಫೆ.05 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಿದಾಯ ಸಮಾರಂಭವನ್ನು ಹೃದಯಸ್ಪರ್ಶಿಯಾಗಿ ಹಮ್ಮಿಕೊಳ್ಳಲಾಯಿತು.

ಸಂಸ್ಥೆಯ ಪದವಿ ಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯ ಎನ್. ಅವರು ಮಾತನಾಡಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪಡೆದ ಜ್ಞಾನ, ಶಿಸ್ತು ಮತ್ತು ಮೌಲ್ಯಗಳನ್ನು ಮುಂದಿನ ಜೀವನದಲ್ಲಿ ಅಳವಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಶುಭಹಾರೈಸಿದರು.

ನಂತರ ಸಂಸ್ಥೆಯ ಸಂಯೋಜಕರಾದ ಯಶವಂತ ಜಿ. ನಾಯಕ್ ಮಾತನಾಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪರಿಶ್ರಮ ಮತ್ತು ಪ್ರಾಮಾಣಿಕತೆಯನ್ನು ಜೀವನದ ಮೂಲ ಮಂತ್ರವನ್ನಾಗಿ ಮಾಡಿಕೊಂಡರೆ ಗುರಿ ಸಾಧನೆ ಸುಲಭವಾಗುತ್ತದೆ ಎಂದು ಪ್ರೇರಣಾತ್ಮಕ ಮಾತುಗಳನ್ನು ಹೇಳಿದರು.

ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ , ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ಹಾಗೂ ವೃತ್ತಿ ಜೀವನದಲ್ಲಿ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಯಶಸ್ಸನ್ನು ಸಾಧಿಸಬೇಕೆಂದು ಶುಭಾಶಯಗಳನ್ನು ಕೋರಿದರು.

ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣದಲ್ಲಿ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಅವರು, ವಿದ್ಯಾರ್ಥಿಗಳು ಕಾಲೇಜಿನೊಂದಿಗೆ ಹೊಂದಿರುವ ಸ್ಮರಣೀಯ ಕ್ಷಣಗಳನ್ನು ಸದಾ ನೆನಪಿನಲ್ಲಿ ಇಟ್ಟುಕೊಂಡು, ಸಮಾಜಕ್ಕೆ ಉಪಯುಕ್ತ ನಾಗರಿಕರಾಗಬೇಕೆಂದು ಹಾರೈಸಿದರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಚೈತ್ರಾ ಮತ್ತು ಫಾತಿಮತ್ ಸಿಫಾನ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ನಿಧಿಶಾ ಸ್ವಾಗತಿಸಿ , ಪ್ರತೀಕ್ಷಾ ವಂದಿಸಿದರು.

ಬೋಧಕ ಹಾಗೂ ಬೋಧಕೇತರ ವೃಂದದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya
error: Content is protected !!