ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಅವರ ಅಧ್ಯಕ್ಷತೆಯಲ್ಲಿ ಫೆ.5ರಂದು ನಡೆಯಬೇಕಿದ್ದ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಕೋರಂ ಕೊರತೆಯಿಂದಾಗಿ ಮುಂದೂಡಲಾಗಿದೆ ಎಂದು ಸಭೆಯಲ್ಲಿ ಅಧ್ಯಕ್ಷರು ತಿಳಿಸಿದರು.

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಗ್ರಾಮಸ್ಥರು ಈ ಕೆಲಸದಲ್ಲಿ ನಿರತರಾಗಿರುವ ಕಾರಣ ಸಭೆಯಲ್ಲಿ ಪಾಲ್ಗೊಳ್ಳಲು ಅಸಾಧ್ಯ ವಾಗಿರಬಹುದು, ಆಗಾಗಿ ಬ್ರಹ್ಮಕಲಶ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಸಭೆ ನಡೆಸಲು ಗ್ರಾಮಸ್ಥರು ಅಭಿಪ್ರಾಯಪಟ್ಟರು.

ಮಾರ್ಗದರ್ಶಿ ಅಧಿಕಾರಿಯಾಗಿ ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಯತೀಶ್ ಕುಮಾರ್ ಎಂ.ಎಸ್ ರವರು ಗ್ರಾಮ ಸಭೆಯಲ್ಲಿ ಭಾಗವಹಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya
error: Content is protected !!