September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

ಬೆಳ್ತಂಗಡಿ: ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ 2ನೇ ಬ್ಯಾಚ್ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ ಫೆ.7ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎನ್.ಇ.ಟಿ ಸಂಸ್ಥೆಗಳ ಸಮೂಹ ಅಧ್ಯಕ್ಷ ಸಜಿ ಪಿಆರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಶ್ರೀಮತಿ ಶೆರ್ಲಿ, ಐ-ಚೆಸ್ ಎಜು ಪ್ರೈ. ಲಿಮಿಟೆಡ್. ನಿರ್ದೇಶಕ ಜಿಮ್ಮಿ ಥಾಮಸ್ ಉಪಸ್ಥಿತರಿದ್ದರು.

ನಂತರ ಫ್ಲಾರೆನ್ಸ್ ನೈಟಿಂಗೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜೆರಿಲ್ ಜಾನ್ಸನ್, ಪ್ರಾಂಶುಪಾಲರು ಪ್ರೊ. ಮನು ಕೆ ಜೋಸೆಫ್, ಆಡಳಿತಗಾರರು ಶ್ರೀಮತಿ ಲುಲು ಮರಿಯಾ, ಎನ್.ಇ.ಟಿ ಟ್ರಸ್ಟಿ ಮತ್ತು ಅಭಯ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ಶ್ರೀಹರಿ, ಎನ್.ಇ.ಟಿ ಟ್ರಸ್ಟಿ ಮತ್ತು ಅಭಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕಿ ಡಾ. ವಿದ್ಯಾ ಗೌರಿ ಉಪಸ್ಥಿತರಿದ್ದರು.

Related posts

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya
error: Content is protected !!