September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ; ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ19 ರಂದು ರೂ.53,03,000/- ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣದಲ್ಲಿ ತನಿಖೆ ಮುಂದುವರಿಸಲಾಗಿ, ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಎಂಬವರನ್ನು ಬಂಧಿಸಲಾಗಿದೆ ಹಾಗೂ ಆರೋಪಿಗಳಿಗೆ ಮಾದಕವಸ್ತು ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ರಾಜ್ಯದ ದೀಪಕ್ ಪಾತ್ರ (37) ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ನೇತೃತ್ವದಲ್ಲಿ, ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ ತೆರಳಿ ದಸ್ತಗಿರಿ ಮಾಡಿದ್ದು, ಈ ವೇಳೆ ಆತನಿಂದ ರೂ 80,೦00/- ಮೌಲ್ಯದ, 1 ಕೆ.ಜಿ 788 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿರುತ್ತದೆ.

ಸದ್ರಿ ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ ರವರು ಹಾಗೂ ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೆನ್, ಸುರೇಶ ಹಾಗೂ ದಿವ್ಯಾಪ್ರಕಾಶ್ ರವರುಗಳನ್ನು ಒಳಗೊಂಡ ತಂಡ ಭಾಗಿಯಾಗಿರುತ್ತಾರೆ.

Related posts

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್, ಶೇ.10 ಡಿಸ್ಕೌಂಟ್ ಸೇಲ್

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya
error: Content is protected !!