March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಸುಕುಧಾರಿಗಳಿಂದ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಚೂರಿಯಿಂದ ಇರಿದು ಹಲ್ಲೆ : ವಿದ್ಯಾರ್ಥಿನಿ ಆಸ್ಪತ್ರೆಗೆ -ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಸುದೇಮುಗೇರು ವಿದ್ಯಾರ್ಥಿನಿ ಇಂದು(ಫೆ.9) ಬೆಳಿಗ್ಗೆ ಸುಮಾರು 8.45 ಕ್ಕೆ ತನ್ನ ದ್ವಿಚಕ್ರವಾಹನದಲ್ಲಿ ಕಾಲೇಜಿಗೆ ಬರುತ್ತಿದ್ದಾಗ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಹಿಂಭಾಗದಲ್ಲಿ ಮಾರುತಿ ಓಮ್ನಿ ಕಾರಿನಲ್ಲಿ ಬಂದ ಮೂರು ಮಂದಿ ಮುಸುಕುಧಾರಿಗಳ ತಂಡ ದ್ವಿಚಕ್ರವಾಹವನ್ನು ತಡೆಗಟ್ಟಿ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿ ಬಳಿಕ ಚೂರಿಯಿಂದ ಇರಿದು ಹಲ್ಲೆ ನಡೆಸಿದ ಘಟನೆ ಇಂದು(ಫೆ.9) ಬೆಳಿಗ್ಗೆ ನಡೆದಿದೆ.

ಹಲ್ಲೆಗೆ ಒಳಗಾದ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು ಬೆಳ್ತಂಗಡಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಪ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya
error: Content is protected !!