September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 19 ನೇ ವರ್ಷದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಅಂಗವಾಗಿ ಹೊರಕಾಣಿಕೆ ಹಾಗೂ ಭಜನೋತ್ಸವ ಕಾರ್ಯಕ್ರಮ ನಡೆಯಿತು.

ಹಸಿರುವಾಣಿ ಹೊರಕಾಣಿಕೆಯನ್ನು ಪ್ರಗತಿಪರ ಕೃಷಿಕ ದೇವಿ ಪ್ರಸಾದ್ ಕಡಮ್ಮಾಜೆ ಉದ್ಘಾಟಿಸಿದರು. ಉರುವಾಲು ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಿಂದ ಭವ್ಯವಾದ ಮೆರವಣಿಗೆಯಲ್ಲಿ ಹೊರಕಾಣಿಕೆಯನ್ನು ತರಲಾಯಿತು.

ಆಹ್ವಾನಿತ ತಂಡದಿಂದ ಭಜನೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸುಧೀರ್ ಕುಮಾರ್ ಹಲೇಜಿ ಕಾರ್ಯಾಧ್ಯಕ್ಷ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಹಲೇಜಿ ಉದ್ಘಾಟಿಸಿ ಮಾತನಾಡಿದರು.

ಈ‌ ಸಂದರ್ಭದಲ್ಲಿ ಶಿಲ್ಪಕಲಾ ಕೇಂದ್ರದ ಅಧ್ಯಕ್ಷ ಪದ್ಮನಾಭ ಶಿಲ್ಪಿ ಪಿಲಿಗೂಡು, ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಭಜನಾ ತರಬೇತುದಾರರಾದ ನಾಗೇಶ್ ನೆರಿಯ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ವಂದಿಸಿದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ವಿಶ್ವ ವೈದ್ಯರ ದಿನಾಚರಣೆ: ಉಪ್ಪಿನಂಗಡಿಯ ವೈದ್ಯರಿಗೆ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya
error: Content is protected !!