ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಸದಸ್ಯರ ನಿಧಿಯಿಂದ ಮಂಜೂರುಗೊಂಡ ರೂ. 1.50 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ 121 ಶಾಲೆಗಳ ಸ್ಮಾರ್ಟ್ ಕ್ಲಾಸ್ ಟಿ.ವಿ ಹಸ್ತಾಂತರ

ಬೆಳ್ತಂಗಡಿ: ಗ್ರಾಮಗಳ ಅಭಿವೃದ್ಧಿ ಗ್ರಾಮೀಣ ಶಾಲೆಗಳ ಅಭಿವೃದ್ಧಿಯ ಮೇಲೆ ಕೇಂದ್ರೀಕೃತವಾಗಿದೆ. ಸರಕಾರಿ ಶಾಲೆಗಳು ಗುಣಮಟ್ಟದೊಡನೆ ಬೆಳೆದಂತೆಲ್ಲಾ ಸಹಜವಾಗಿಯೇ ಗ್ರಾಮಗಳು ಬಲಗೊಳ್ಳುತ್ತವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯಪಟ್ಟರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಛೇರಿಯಲ್ಲಿ ನೆರವೇರಿದ ಸ್ಮಾರ್ಟ್ ಕ್ಲಾಸ್ ಟಿ.ವಿ ಹಸ್ತಾಂತರ ಕಾರ್ಯಕ್ರಮ ಹಾಗೂ ತಾಂತ್ರಿಕ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ತಂತ್ರಾಜ್ಞಾನ ಆಧಾರಿತ ಶಿಕ್ಷಣ ನೀಡುವಲ್ಲಿ ಸ್ಮಾರ್ಟ್ ಟಿವಿಯಿಂದ ದೊರಕಬಲ್ಲ ಸ್ಮಾರ್ಟ್ ಕ್ಲಾಸ್ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಸಮರ್ಪಕ ತರಬೇತಿ ಮೂಲಕ ಆಧುನಿಕ ಶಿಕ್ಷಣಕ್ಕೆ ಪೂರಕವಾಗುವಂತೆ ಈ ಹೊಸ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್ ಎಸ್ ಮಾತನಾಡಿ ಶ್ರೀಕ್ಷೇತ್ರದ ಮೂಲಕ ಹೆಗ್ಗಡೆಯವರು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಅಪೂರ್ವವಾದದ್ದು. ಪೂಜ್ಯರು ಗ್ರಾಮೀಣ ವಿದ್ಯಾರ್ಥಿಗಳ ಅಭಿವೃದ್ಧಿಗೆ, ಮೂಲಭೂತ ಸೌಕರ್ಯಗಳಾದ ಶಾಲಾ ಕೊಠಡಿ, ಆಟದ ಮೈದಾನ, ಕುಡಿಯುವ ನೀರು, ಶಾಲಾ ಕಟ್ಟಡಗಳ ದುರಸ್ತಿ, ಶೌಚಾಲಯ, ಶಾಲಾ ಆವರಣ, ರಂಗಮಂದಿರ, ಭೋದನಾ ಸಾಮಾಗ್ರಿಗಳ ಒದಗಣೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಪರಿಚಯಿಸಿದ್ದು ಇದಕ್ಕಾಗಿ ಇದುವರೆಗೆ ಒಟ್ಟು ರೂ. 47.69 ಕೋಟಿ ಪೂರಕ ಅನುದಾನವನ್ನು ನೀಡಿರುತ್ತಾರೆ. ಅಲ್ಲದೆ ಪ್ರಸ್ತುತ ವರ್ಷದಲ್ಲಿ 1074 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕ/ಶಿಕ್ಷಕಿಯರನ್ನು ನಿಯೋಜಿಸಿದ್ದು, ಇದುವರೆಗೆ ಒಟ್ಟು 10,351 ಜ್ಞಾನದೀಪ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. ಶಿಕ್ಷಣಕ್ಕೆ ಪೂರಕವಾಗಿ “ಸುಜ್ಞಾನನಿಧಿ ಶಿಷ್ಯವೇತನ” ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು, ಈ ಕಾರ್ಯಕ್ರಮದಲ್ಲಿ ಇದುವರೆಗೆ ರಾಜ್ಯದ 1,27,593 ವಿದ್ಯಾರ್ಥಿಗಳಿಗಾಗಿ ರೂ. 157.39 ಕೋಟಿ ಮೊತ್ತದ ವಿದ್ಯಾರ್ಥಿವೇತನ ನೀಡಲಾಗಿದೆ. ಹಾಗೂ ಸರಕಾರಿ ಶಾಲೆಗಳಿಗೆ ಡೆಸ್ಕ್ ಬೆಂಚ್‌ಗಳ ಕೊರತೆಯನ್ನು ನಿಗಿಸುವ ಸಲುವಾಗಿ ಒಟ್ಟು ರಾಜ್ಯದ 11,621 ಶಾಲೆಗಳಿಗೆ 75,518 ಜೊತೆ ಡೆಸ್ಕ್-ಬೆಂಚ್ ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಸರಕಾರಿ ಶಾಲೆಗಳು ಯಾವ ಕಾರಣಕ್ಕೂ ಮುಚ್ಚಬಾರದು ಎಂಬ ಹಿನ್ನೆಲೆಯಲ್ಲಿ ಹೆಗ್ಗಡೆಯವರ ಶ್ರಮ ಗಣನೀಯವಾಗಿದ್ದು ಬಡವಿದ್ಯಾರ್ಥಿಗಳ ಕನಸನ್ನು ಸಾಕಾರಗೊಳಿಸುವಲ್ಲಿ ಹೆಗ್ಗಡೆಯವರು ವಿದ್ಯಾರ್ಥಿಗಳ ಬೆನ್ನಿಗೆ ನಿಂತಿದ್ದು ಹಲವು ಮಕ್ಕಳ ಕನಸು ಇಂದು ನನಸಾಗಿದೆ. ಸರಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಬೋಧಿಸಲು ಸ್ಮಾರ್ಟ್ ಕ್ಲಾಸ್ ಕಾರ್ಯಕ್ರಮ ಸಹಕಾರಿಯಾಗಿದ್ದು ಪೂಜ್ಯರ ಅಭಿವೃದ್ಧಿ ಕಾಯಕಲ್ಪ ಸಮಾಜಕ್ಕೆ ಮಾದರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದ.ಕ ಜಿಲ್ಲೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವೇಣುಗೋಪಾಲ್. ಆರ್, ಬೆಳ್ತಂಗಡಿ ತಾಲೂಕು ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೆ. ಬಿ ಜನಾರ್ಧನ್, ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೆರೆ ಹಗೂ ಶುದ್ಧಗಂಗಾ ವಿಭಾಗದ ನಿರ್ದೇಶಕ ಸಂತೋಷ್ ಸ್ವಾಗತಿಸಿ, ಸಮುದಾಯಭಿವೃದ್ಧಿ ವಿಭಾಗದ ನಿರ್ದೇಶಕ ಮಹಾಬಲ ಕುಲಾಲ್ ವಂದಿಸಿ, ಪೂಜಾ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya
error: Content is protected !!