September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ, ಮಹಿಳಾ ಬಿಲ್ಲವ ವೇದಿಕೆ ಸಹಕಾರದಿಂದ, ಯುವ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ವಾರ್ಷಿಕ ಕ್ರೀಡಾಕೂಟವು ಬಳಂಜ ಸಂಘದ ವಠಾರದಲ್ಲಿ ಫೆ.8ರಂದು ನಡೆಯಿತು.

ಕ್ರೀಡಾಕೂಟವನ್ನು ಗುರುವಾಯನಕೆರೆ ನಿಸರ್ಗ ಕರ್ಟನ್ ಸಂಸ್ಥೆಯ ಮಾಲಕ ನಾಗೇಶ್ ಕೋಟ್ಯಾನ್ ಉದ್ಘಾಟಿಸಿ ಶುಭ ಕೋರಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿದ್ದರು.ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷ ಚಿದಾನಂದ ಇಡ್ಯ ಸಮವಸ್ತ್ರ ಅನಾವರಣಗೊಳಿಸಿದರು. ಬೆಳ್ತಂಗಡಿ ಇಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷ ಸುರೇಶ್ ಬಂಗೇರ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಕ್ರೀಡಾಕೂಟದಲ್ಲಿ ಮಹಿಳೆಯರು,ಮಕ್ಕಳು,ಪುರುಷರು ಅತ್ಯಂತ ಖುಷಿಯಿಂದ ಪಾಲ್ಗೊಂಡರು. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ದೆ ಏರ್ಪಡಿಸಲಾಗಿತ್ತು.

ವೇದಿಕೆಯಲ್ಲಿ ಬೆಳ್ತಂಗಡಿ ಮಾತೃಶ್ರೀ‌ ಸಿಲ್ಕ್ ಮತ್ತು ರೆಡಿಮೇಡ್ಸ್ ಮಾಲಕರಾದ ಮೋಹನ್ ಸುವರ್ಣ,ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್ , ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು, ಯುವವಾಹಿನಿ ವೇಣೂರು ಘಟಕಾಧ್ಯಕ್ಷ ಪ್ರಕಾಶ್ ಕೋಟ್ಯಾನ್, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಶುಭಕರ ಪೂಜಾರಿ ಸಾವ್ಯ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್ ಧರ್ಣಪ್ಪ ಪೂಜಾರಿ, ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಕಾರ್ಯದರ್ಶಿ ರಂಜಿತ್ ಪೂಜಾರಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಕಾರ್ಯದರ್ಶಿ ಸತೀಶ್ ಕೋಟ್ಯಾನ್,ಮಹಿಳಾ ಬಿಲ್ಲವ ವೇದಿಕೆ ಅದ್ಯಕ್ಷೆ ಭಾರತಿ ಸಂತೋಷ್, ಕಾರ್ಯದರ್ಶಿ ಸಂಧ್ಯಾ ಹೆಚ್.ಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಬಳಂಜ, ಭೋಜನದ ವ್ಯವಸ್ಥೆಗೆ ಸಹಕಾರ ನೀಡಿದ ಪುರಂದರ ಪೂಜಾರಿ ಪೆರಾಜೆ ಹಾಗೂ ಬಳಂಜ ಸಂಘದ ಪೂರ್ವಾಧ್ಯಕ್ಷರನ್ನು ಗೌರವಿಸಲಾಯಿತು.

ಮಹಿಳಾ ಬಿಲ್ಲವ ವೇದಿಕೆಯ ಪುಷ್ಪಾಗಿರೀಶ್ ಪ್ರಾರ್ಥನೆಗೈದರು, ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಪ್ರಸ್ತಾವಣೆಯೊಂದಿಗೆ ಸ್ವಾಗತಿಸಿದರು. ಮಹಿಳಾ ಬಿಲ್ಲವ ವೇದಿಕೆ ಪೂರ್ವಾಧ್ಯಕ್ಷೆ ವಿಶಾಲ ಜಗದೀಶ್ ನಿರೂಪಿಸಿದರು. ಸಂಘದ ನಿರ್ದೇಶಕ ಯತೀಶ್ ವೈ.ಎಲ್ ವಂದಿಸಿದರು. ಸಂಘದ ನಿರ್ದೇಶಕರು, ಸದಸ್ಯರು ಸಹಕರಿಸಿದರು.

Related posts

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಮದ್ದಡ್ಕ: ಬೈಕ್ ಮತ್ತು ಸ್ಕೂಟಿ ಅಪಘಾತ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya
error: Content is protected !!