September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

ಉಜಿರೆ: ಸ್ವಚ್ಛ ಪರಿಸರ ಪ್ರತಿಯೊಬ್ಬ ನಾಗರಿಕನ ಮೂಲಭೂತ ಜವಾಬ್ದಾರಿಯಾಗಿದೆ. ನಮ್ಮ ಪರಿಸರದ ಸ್ವಚ್ಛತೆಯ ಜವಾಬ್ದಾರಿ ನಮ್ಮದಾದರೆ ನಮ್ಮ ಪರಿಸರ ಸ್ವಚ್ಛವಾಗುತ್ತದೆ. ಅಂತಿಮವಾಗಿ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸು ನನಸಾಗುತ್ತದೆ. ಈ ನಿಟ್ಟಿನಲ್ಲಿ ನಡೆಯುವ ಸ್ವಚ್ಛತಾ ಶ್ರಮದಾನವು ಸಮಾಜ ಜಾಗೃತಿಯ ದ್ಯೋತಕವಾಗಿದೆ ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷ ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು.

ಅವರು ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದೊಂದಿಗೆ ಉಜಿರೆಯಲ್ಲಿ ನಡೆದ 26ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು.

ಆದರ್ಶ ಸೇವಾ ಟ್ರಸ್ಟ್ ಹಳೇಪೇಟೆ ಇದರ ಕೋಶಾಧಿಕಾರಿ ರಾಮದಾಸ್ ಭಂಡಾರ್ಕರ್ , ಸಾಮಾಜಿಕ ಮುಖಂಡ ಝಕಾರಿಯಾ ಕುಂಟಿನಿ ಹಾಗೂ ಕರಾಟೆ ತರಬೇತುದಾರ ಅಬ್ದುಲ್ ರಹಿಮಾನ್ ರವರು ಹಸಿರು ನಿಶಾನೆಯನ್ನು ತೋರುವ ಮೂಲಕ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿದರು.

ಉಜಿರೆ ಗ್ರಾಮದ ಕುಂಟಿನಿ ಪರಿಸರದ ಸುತ್ತಮುತ್ತಲಿನಲ್ಲಿ ಸ್ವಚ್ಛತೆಯ ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮವು ನಡೆಯಿತು.
ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಳೇಪೇಟೆ ಇದರ ಉಪಾಧ್ಯಕ್ಷ ಹೈದರ್ ಮದನಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಂಟಿನಿ ಇದರ ಉಪಾಧ್ಯಕ್ಷ ಇಲ್ಯಾಸ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶರೀಫ್, ಪ್ರಮುಖರಾದ ಹನೀಫ್, ಅಶ್ರಫ್, ಉಬೆದ್ ನಜತ್, ನೃತ್ಯ ತರಬೇತುದಾರ ಉದಯ್ ಎ ಕೆ, ಬ್ಯಾಂಕಿನ ಗ್ರಾಹಕರು, ಸದಸ್ಯರು, ಹಿತೈಷಿಗಳು, ಉಜಿರೆ ಶಾಖಾ ವ್ಯವಸ್ಥಾಪಕ ಲೋಕೇಶ್ ಎಸ್ ಆರ್ ಹಾಗೂ ಸಿಬ್ಬಂದಿಗಳು ಸ್ವಯಂ ಸೇವಕರಾಗಿ ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya
error: Content is protected !!