23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

ಉಜಿರೆ: “ಜನಸಂಖ್ಯೆಯಲ್ಲಿ ಮುಂದಿರುವ, ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ ಶಾಂತಿಯ ಕೊರತೆ, ಬಡತನ ಕಂಡುಬರುತ್ತಿದ್ದು, ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಹಲವಾರು ಕೆಲಸಗಳು ಭೂಮಿಯ ಮೇಲೆ, ಪರಿಸರ ಮೇಲೆ ಪ್ರಭಾವ ಬೀರುತ್ತಿವೆ. ಭಾರತ ಹಳ್ಳಿಗಳ ದೇಶವಾದ್ದರಿಂದ ನಮ್ಮ ದೇಶದ ಅಭಿವೃದ್ಧಿ ಹಳ್ಳಿಗಳಿಂದಲೇ ಪ್ರಾರಂಭವಾಗಬೇಕು” ಎಂದು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅಭಿಪ್ರಾಯಪಟ್ಟರು.

ಇಲ್ಲಿನ ಶ್ರೀ ಧ.ಮಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ (Rural Livelihoods and Sustainability: A Global Perspective) ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಇಂದು (ಫೆ.9) ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜಿನ ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಜಂಟಿ ಸಹಭಾಗಿತ್ವದಲ್ಲಿ ನವದೆಹಲಿಯ ಭಾರತೀಯ ಸಾಮಾಜಿಕ ವಿಜ್ಞಾನ ಸಂಶೋಧನಾ ಮಂಡಳಿ (ICSSR) ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

“ಪ್ರಾಕೃತಿಕವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಕೇವಲ ನಾವು ಮಾತ್ರ ಉಪಯೋಗಿಸುವುದಲ್ಲದೇ ನಮ್ಮ ಮುಂದಿನ ಪೀಳಿಗೆಗೂ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮಗಿದೆ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಭೂಮಿಗೆ ಹಲವಾರು ತೊಂದರೆಗಳಾಗುತ್ತಿದೆ. ಇದರಿಂದಾಗಿ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಕಳೆದ ಎರಡು ವರ್ಷಗಳನ್ನು ನೋಡುವುದಾದರೆ ಶೇ.68ರಷ್ಟಿದ್ದ ಗ್ರಾಮ್ಯ ಪ್ರದೇಶಗಳು ಇಂದು ಶೇ.63 ಕ್ಕೆಇಳಿದಿವೆ. ಹಳ್ಳಿಗಳ ಅಭಿವೃದ್ಧಿಯೊಂದಿಗೆ ದೇಶದ ಅಭಿವೃದ್ಧಿ ಪ್ರಾರಂಭವಾಗಬೇಕು. ವಿದ್ಯಾರ್ಥಿಗಳು ಗ್ರಾಮೀಣ ಅಭಿವೃದ್ಧಿ, ಸುಸ್ಥಿರ ಅಭಿವೃದ್ಧಿ ಕುರಿತು ಹೆಚ್ಚು ತಿಳಿದುಕೊಳ್ಳಬೇಕು. ಈ ನಿಟ್ಟಿನಲ್ಲಿ ಈ ವಿಚಾರ ಸಂಕಿರಣ ವಿದ್ಯಾರ್ಥಿಗಳಿಗೆ ಸಹಾಯಕ” ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹಲವಾರು ದಶಕಗಳಿಂದ ನಡೆಸಿಕೊಂಡು ಬರುತ್ತಿರುವ ವಿದ್ಯಾದಾನ, ಅನ್ನದಾನ, ಆರೋಗ್ಯದಾನ, ಮತ್ತು ಅಭಯದಾನ ಎಂಬ ಚತುರ್ದಾನಗಳು ಸುಸ್ಥಿರ ಅಭಿವೃದ್ಧಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ಉತ್ತಮ ಉದಾಹರಣೆಯಾಗಿವೆ ಎಂದರು.

ಅತಿಥಿ, ಅಮೆರಿಕಾದ ಮೆಕ್ಸಿಕೋ ಸಿಟಿಯ ಲ್ಯಾಟಿನ್ ಅಮೆರಿಕನ್ ಫ್ಯಾಕಲ್ಟಿ ಆಫ್ ಸೋಷಿಯಲ್ ಸೈನ್ಸ್ ಪ್ರಾಧ್ಯಾಪಕ ಪ್ರೊ. ಮರಿಯಾನೋ ರೋಜಸ್ (Prof.Mariano Rojas) ಶುಭಾಶಂಸನೆಗೈದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ., ಗ್ರಾಮ್ಯ ಪ್ರದೇಶಗಳು ನಿರ್ದಿಷ್ಟ ಕೆಲಸದ ಅವಕಾಶಗಳು, ವಿದ್ಯಾ ಸಂಸ್ಥೆಗಳ ಕೊರತೆ ಮುಂತಾದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿವೆ. ಇವುಗಳೇ ದೇಶದ ಅಭಿವೃದ್ಧಿಗೆ ದೊಡ್ಡ ಸಮಸ್ಯೆಗಳಾಗಿ ಮಾರ್ಪಾಡಾಗುತ್ತವೆ ಎಂದು ಅಭಿಪ್ರಾಯಪಟ್ಟರು.

35 ಸಂಶೋಧನಾ ಪ್ರಬಂಧಗಳನ್ನು ಒಳಗೊಂಡ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಮರಿಯಾನೊ ರೋಜಸ್ ಮತ್ತು ಶ್ರೀಲಂಕಾದ ಸಂಪನ್ಮೂಲ ವ್ಯಕ್ತಿ ನಳಿನಿ ರತ್ನರಾಜ್ ಅವರನ್ನು ಸನ್ಮಾನಿಸಲಾಯಿತು. ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ. ರತ್ನಾವತಿ ಕೆ., ಪ್ರಾಧ್ಯಾಪಕರಾದ ಡಾ. ಭಾನುಪ್ರಕಾಶ್ ಬಿ.ಇ., ಗುರುರಾಜ್, ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಮತ್ತಿತರರು ಉಪಸ್ಥಿತರಿದ್ದರು.

ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿಭಾಗ ಮುಖ್ಯಸ್ಥ, ವಿಚಾರ ಸಂಕಿರಣದ ಸಂಚಾಲಕ ಡಾ. ಗಣರಾಜ್ ಕೆ. ಸ್ವಾಗತಿಸಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿಯರಾದ ಫಾತಿಮಾ ಸಫೀರಾ ಮತ್ತು ದೀಕ್ಷಿತಾ ಕುಮಾರಿ ನಿರೂಪಿಸಿದರು. ಕ್ಷಿತಿ ರೈ ಮತ್ತು ತಂಡದವರು ಪ್ರಾರ್ಥಿಸಿದರು. ವಾಣಿಜ್ಯ ನಿಕಾಯದ ಡೀನ್, ವ್ಯವಹಾರ ಆಡಳಿತ ವಿಭಾಗ ವಿಭಾಗ ಮುಖ್ಯಸ್ಥೆ ಡಾ. ಶಕುಂತಲಾ ವಂದಿಸಿದರು.

Related posts

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ “ವನ್ ಮಿನಿಟ್ ಉಮಾ”ರಿಂದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ

Suddi Udaya
error: Content is protected !!