ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 19 ನೇ ವರ್ಷದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಅಂಗವಾಗಿ ಹೊರಕಾಣಿಕೆ ಹಾಗೂ ಭಜನೋತ್ಸವ ಕಾರ್ಯಕ್ರಮ ನಡೆಯಿತು.

ಹಸಿರುವಾಣಿ ಹೊರಕಾಣಿಕೆಯನ್ನು ಪ್ರಗತಿಪರ ಕೃಷಿಕ ದೇವಿ ಪ್ರಸಾದ್ ಕಡಮ್ಮಾಜೆ ಉದ್ಘಾಟಿಸಿದರು. ಉರುವಾಲು ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಿಂದ ಭವ್ಯವಾದ ಮೆರವಣಿಗೆಯಲ್ಲಿ ಹೊರಕಾಣಿಕೆಯನ್ನು ತರಲಾಯಿತು.
ಆಹ್ವಾನಿತ ತಂಡದಿಂದ ಭಜನೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸುಧೀರ್ ಕುಮಾರ್ ಹಲೇಜಿ ಕಾರ್ಯಾಧ್ಯಕ್ಷ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಹಲೇಜಿ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಿಲ್ಪಕಲಾ ಕೇಂದ್ರದ ಅಧ್ಯಕ್ಷ ಪದ್ಮನಾಭ ಶಿಲ್ಪಿ ಪಿಲಿಗೂಡು, ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಭಜನಾ ತರಬೇತುದಾರರಾದ ನಾಗೇಶ್ ನೆರಿಯ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ವಂದಿಸಿದರು.











