July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಬೆಳ್ತಂಗಡಿಯ ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ದಿನದ ಗ್ರಾಮ ಸ್ವರಾಜ್ ವಿಶೇಷ ಜಾಗೃತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ 90ಕ್ಕೂ ಅಧಿಕ ವಿದ್ಯಾರ್ಥಿಗಳು 10 ತಂಡಗಳನ್ನು ಮಾಡಿಕೊಂಡು ಶಿಶಿಲ ಗ್ರಾಮ ಪಂಚಾಯತ್ ಗೆ ಒಳಪಡುವ 250ಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿ ಮತದಾನ, ಗ್ರಾಮ ಸ್ವಚ್ಚತೆ, ಗ್ರಾಮ ಆಡಳಿತ ಇತ್ಯಾದಿ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು. ಇದೇ ವೇಳೆ ಜನರ ಮನವಿ ಮತ್ತು ಬೇಡಿಕೆಗಳನ್ನು ಗ್ರಾಮ ಪಂಚಾಯತ್ ಆಡಳಿತ ಕಛೇರಿಗೆ ತಲುಪಿಸಿದರು.

ಕಾರ್ಯಕ್ರಮದಲ್ಲಿ ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುದಿನ ಶಿಶಿಲ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಶಿಲ ಗ್ರಾಮ ಪಂಚಾಯತ್ ಸದಾ ಗ್ರಾಮದ ಅಭಿವೃದ್ಧಿ ಕಡೆಗೆ ಒತ್ತು ನೀಡುತ್ತಿದೆ ಜೊತೆಗೆ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಆಡಳಿತಕ್ಕೆ ಒಳಪಡುವ ಹಲವು ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಿರುವುದು ಬಹು ಅಭಿನಂದನಾ ಕಾರ್ಯಕ್ರಮ. ಈ ಕಾರ್ಯಕ್ರಮ ಗ್ರಾಮದ ಜನರು ಮತ್ತು ಪಂಚಾಯತ್ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿ, ಹೆಚ್ಚಿನ ಮಾಹಿತಿಯನ್ನು ನೀಡುವುದರಲ್ಲಿ ಯಶಸ್ವಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಿಶಿಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸಂದೀಪ್ ಮಾತನಾಡಿ, ಬೆಳ್ತಂಗಡಿ ತಾಲೂಕಿನ ಗ್ರಾಮಗಳು ಅಭಿವೃದ್ಧಿಯಾಗಿದೆ ಎಂದರೆ ಅದರಲ್ಲಿ ಸಾಕಷ್ಟು ವ್ಯಕ್ತಿಗಳು ಕೈಜೋಡಿಸಿದ್ದಾರೆ. ವಿದ್ಯಾರ್ಥಿಗಳ ಪಾತ್ರವು ಪ್ರಮುಖವಾಗಿದೆ ಎಂದರು.

ಕಾರ್ಯಕ್ರಮದ ಸಂಯೋಜಕ ಎಸ್.ಡಿ.ಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ನಟರಾಜ್ ಮಾತನಾಡಿ, ಗ್ರಾಮ ಸ್ವರಾಜ್ ಕಾರ್ಯಕ್ರಮವು ಗ್ರಾಮೀಣ ಜನತೆಯಲ್ಲಿ ಪಂಚಾಯತ್ ಕಾರ್ಯವಿಧಾನಗಳ ಅರಿವು ಮೂಡಿಸಿ, ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡುವ ಜನಪರ ಕಾರ್ಯಕ್ರಮವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಿತ್ತಿ ಪತ್ರವನ್ನು ಅನಾವರಣ ಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಆಶಾ ಕಾರ್ಯಕರ್ತೆ ರೂಪ ಹಾಗೂ ಭಗೀರತಿ, ಸಂಜೀವಿನಿ ಒಕ್ಕೂಟದ ಜನಸಖಿ ಅಕ್ಷತಾ ಹಾಗೂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಶಿವಕುಮಾರ್ ಸೇರಿದಂತೆ ಗ್ರಾಮಸ್ಥರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.ವಿದ್ಯಾರ್ಥಿ ನಿಖಿಲ್ ರೈ ಸ್ವಾಗತಿಸಿದರು. ವಿದ್ಯಾರ್ಥಿನಿ ಕೀರ್ತಿ ಭಟ್ ನಿರೂಪಿಸಿ, ಕುಮಾರಿ ಅಕ್ಷತಾ ವಂದಿಸಿದರು.

Related posts

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!