22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ. 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕೊಕ್ಕಡ ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.09ರಂದು ಕೊಕ್ಕಡದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕಿನ ಗೌರವ ಸಲಹೆಗಾರರು ಶ್ರೀ ಮಹಾಗಣಪತಿ ದೇವಸ್ಥಾನ ಸೌತಡ್ಕ ಇಲ್ಲಿಯ ಆಡಳಿತ ಸಮಿತಿಯ ಸದಸ್ಯರೂ, ಉಜಿರೆ ಮೂರ್ತೆದಾರರ ಸಂಘದ ಅಧ್ಯಕ್ಷ ವಿಶ್ವನಾಥ್ ಕೊಲ್ಲಾಜೆ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ವೇದಿಕೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಧರ್ಮಸ್ಥಳ ಜಿಲ್ಲಾ ಪಂಚಾಯತ್ ಸಂಚಾಲಕ ರೂಪೇಶ್ ಕೆ ಧರ್ಮಸ್ಥಳ, ಪುದುವೆಟ್ಟು ಗ್ರಾಮ ಪಂಚಾಯತ್ ನ ಅಧ್ಯಕ್ಷ , ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಲಯ ಸಂಚಾಲಕ ಪೂರ್ಣಕ್ಷ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಕೆ ಜೆ, ಕಾರ್ಯದರ್ಶಿಯಾದ ತಿಮ್ಮಪ್ಪ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿಶ್ವನಾಥ್ ಕೊಲ್ಲಾಜೆ ಸಂಯೋಜಿಸಿದರು.

Related posts

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya
error: Content is protected !!