23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಕಲ್ಮಂಜ : ಧರ್ಮಸ್ಥಳ-ಮುಂಡಾಜೆ ಸಂಪರ್ಕ ರಸ್ತೆಯ ಕಲ್ಮಂಜ ಗ್ರಾಮದ ಕೊತ್ತಲಿಗೆ, ಒಂಜರೆಬೈಲು ಹಾಗೂ ಪಿಲತ್ತಡ್ಕದಲ್ಲಿ ಒಟ್ಟು 3 ನೂತನ ಸೇತುವೆ ನಿರ್ಮಾಣಕ್ಕೆ ರೂ. 3.75 ಅನುದಾನವನ್ನು ಒದಗಿಸಿ, ಇಂದು ಮೂರೂ ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜಾ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಿದರೆ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಿಷ್ಪಕ್ಷಪಾತವಾಗಿ ಶ್ರಮ ವಹಿಸುತ್ತಿದ್ದೇನೆ. ಧರ್ಮಸ್ಥಳ ಮುಂಡಾಜೆ ರಸ್ತೆಯು ಅತ್ಯಂತ ಪ್ರಮುಖ ರಸ್ತೆಗಳಲ್ಲೊಂದಾಗಿದ್ದು, ಈಗಾಗಲೇ 3 ನೂತನ ಸೇತುವೆ ನಿರ್ಮಾಣಕ್ಕೆ ರೂ. 3.75 ಕೋಟಿ ಅನುದಾನ ಮೀಸಲಿರಿಸಿ, ಶಿಲನ್ಯಾಸ ನೆರವೇರಿಸಲಾಗಿದೆ. ಆದಷ್ಟು ಶೀಘ್ರವೇ ನೂತನ ಸೇತುವೆಗಳ ನಿರ್ಮಾಣವಾಗುತ್ತದೆ ಎಂದು ಭರವಸೆ ನೀಡಿದರು. ಸೇತುವೆ ನಿರ್ಮಾಣ ಕಾರ್ಯದ ಸಂದರ್ಭದಲ್ಲಿ ಸ್ಥಳೀಯರು ಸಂಪೂರ್ಣ ಸಹಕಾರ ನೀಡಬೇಕಾಗಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಥಳೀಯರಾದ ಶ್ರೀನಿವಾಸ್ ರಾವ್ ಅವರು, ಶಾಸಕರು ಗ್ರಾಮಸ್ಥರ ಬೇಡಿಕೆಗಳಿಗೆ ತಕ್ಷಣವೇ ಸ್ಪಂದಿಸುತ್ತಿದ್ದಾರೆ. ಮುಂಡಾಜೆ ಹಾಗೂ ಕಲ್ಮಂಜ ಗ್ರಾಮಸ್ಥರ ಬಹುಬೇಡಿಕೆಯ ಮೂರು ಸೇತುವೆಗಳನ್ನು ಅಭಿವೃದ್ಧಿಗೊಳಿಸುತ್ತಿರುವುದು ಸಂತಸ ತಂದಿದೆ. ಅಲ್ಲದೆ, ಎರಡು ಭಾಗವಾಗಿದ್ದ ಕಲ್ಮಂಜ ಗ್ರಾಮವನ್ನು ಪಜಿರಡ್ಕದಲ್ಲಿ ಕಿಂಡಿ ಅಣೆಕಟ್ಟು ಸಹಿತ ಬೃಹತ್ ಸೇತುವೆ ನಿರ್ಮಾಣದ ಮೂಲಕ ಒಂದು ಮಾಡಿದ್ದಾರೆ. ತಾಲೂಕಿನ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಇಂತಹ ಶಾಸಕರನ್ನು ಪಡೆದ ನಾವೇ ಪುಣ್ಯವಂತರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್. ಸಾಲ್ಯಾನ್, ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ ವಿಮಲ, ಗ್ರಾ ಕಾರ್ಯದರ್ಶಿ ಸರೋಜಿನಿ, ಗ್ರಾಮ ಪಂಚಾಯತ್ ಸದಸ್ಯರು, ಬೂತ್ ಬಿಜೆಪಿ ಅಧ್ಯಕ್ಷರಾದ ಅನಿಲ್ ಗೌಡ, ಸ್ಥಳೀಯರಾದ ಸುಬ್ರಹ್ಮಣ್ಯ ಹೆಬ್ಬಾರ್, ಶ್ರೀನಿವಾಸ್ ರಾವ್, ದೇವಪ್ಪ ಆಚಾರಿ, ಪ್ರದೀಪ್ ಚಿಪ್ಳೂಣ್ ಕರ್, ಇಂಜಿನಿಯರ್, ಗುತ್ತಿಗೆದಾರರು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Related posts

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya
error: Content is protected !!