September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

ಬೆಳ್ತಂಗಡಿ: ತಾಲೂಕಿನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆ ಪ್ರಕರಣಗಳ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಫೆ.10ರಂದು ತಾಲೂಕು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.

ಕಳೆದ ಒಂದಷ್ಟು ದಿನಗಳಿಂದ ತಾಲೂಕಿನಲ್ಲಿ ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಿದೆ. ಈಗಾಗಲೆ ಕಳೆದ 20 ದಿನಗಳ ಹಿಂದೆ ಬೆಳ್ತಂಗಡಿಯ ಸಂಭೋಳ್ಯ ಎಂಬಲ್ಲಿ ಸುಮಂತ್ ಎಂಬ ವಿದ್ಯಾರ್ಥಿಯ ಹತ್ಯೆಯಾಗಿದ್ದು ಈ ಪ್ರಕರಣದಲ್ಲೂ ಯಾವುದೇ ಆರೋಪಿಗಳು ಪತ್ತೇಯಾಗದೆ ಇರುವುದು ವಿಷಾದಕರ ಸಂಗತಿ. ಜೊತೆಗೆ ಫೆ.9 ರಂದು ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಮುಸುಕುಧಾರಿಗಳು ನಡೆಸಿರುವ ಹಲ್ಲೆ ಪ್ರಕರಣ ತಾಲೂಕಿನ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿರುವುದಲ್ಲದೆ ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿದೆ. ಈ ಎಲ್ಲಾ ಪ್ರಕರಣಗಳ ಗಂಭೀರತೆಯನ್ನು ಅರಿತು, ಉನ್ನತ ಮಟ್ಟದ ತನಿಖಾ ತಂಡಕ್ಕೆ ನೀಡಿ ಆರೋಪಿಗಳನ್ನ ಕೂಡಲೇ ಪತ್ತೆಹಚ್ಚಿವುದರೊಂದಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದರು.

ಬಳಿಕ ಬೆಳ್ತಂಗಡಿ ತಹಶೀಲ್ದಾರ್ ರವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ್ ನಿಶಾಂತ್, ರಾಜ್ಯ ಸಹ ಕಾರ್ಯದರ್ಶಿ ಸುವಿತ್ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯ ಆಕಾಶ್, ಶಿವಪ್ರಸಾದ್, ಸಾರ್ಥಕ್ ಮತ್ತಿತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ

Suddi Udaya

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya
error: Content is protected !!