ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿ

ಕೊಂಡ ಗಾಯ (Self inflicted wound) ಎಂದು ಕಂಡು ಬಂದಿದೆ.
ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ಬಾಲಕಿ ಮತ್ತೋಂದು ಹೇಳಿಕೆ ನೀಡಿದ್ದಾಳೆ.
ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಸದ್ರಿ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸ ಲಾಗುವುದು. ಅಪ್ರಾಪ್ತೆಗೆ ಚಲಾಯಿಸಲು ವಾಹನ ನೀಡಿರುವ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya
error: Content is protected !!