September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಮುಸುಕುಧಾರಿಗಳ ತಂಡವೊಂದು ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿ, ಚೂರಿಯಿಂದ ತಿವಿದ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಇದೊಂದು ಕಟ್ಟು ಕಥೆ ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂಬ ವದಂತಿ ಹಬ್ಬಿದೆ.
ಸುದೇಮುಗೇರು ಸಮೀಪದ ವಿದ್ಯಾರ್ಥಿನಿ ಕಾಲೇಜಿಗೆ ಹೋಗಲೆಂದು ನಿನ್ನೆ ಬೆಳಿಗ್ಗೆ ಸುಮಾರು 8.45ಕ್ಕೆ ತನ್ನ ದ್ವಿಚಕ್ರವಾಹನದಲ್ಲಿ ಬರುತ್ತಿದ್ದಾಗ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಹಿಂಭಾಗದಲ್ಲಿ ಸುದೇಮುಗೇರು ಸಮೀಪ ರಸ್ತೆ ತಿರುವಿನಲ್ಲಿ ಕಾರಿನಲ್ಲಿ ಬಂದ ಮೂರು ಮಂದಿ ಮುಸುಕುಧಾರಿಗಳ ತಂಡ ದ್ವಿಚಕ್ರವಾಹವನ್ನು ತಡೆಗಟ್ಟಿ ವಿದ್ಯಾರ್ಥಿನಿಯನ್ನು ಎಳೆದೊಯ್ಯಲು ಯತ್ನಿಸಿದರೆನ್ನಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ಪ್ರತಿರೋಧ ತೋರಿದಾಗ ಮುಸುಕುಧಾರಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದು, ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಸ್ಕೂಟರ್ ಸವಾರ ಹಾರ್ನ್ ಮಾಡಿದ್ದನ್ನು ಕೇಳಿಸಿಕೊಂಡ ತಂಡ ಅಲ್ಲಿಂದ ಪರಾರಿಯಾಯಿಂತೆಂದು ಗಾಯಾಳು ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದರು.

ಇದೀಗ ಪ್ರಕರಣ ಹೊಸ ತಿರುವುವನ್ನು ಪಡೆದುಕೊಂಡಿದ್ದು, ವಿದ್ಯಾರ್ಥಿನಿಗೆ ಕಾಲೇಜಿಗೆ ಹೋಗಲು ಇಷ್ಟವಿರಲಿಲ್ಲ. ಇದಕ್ಕಾಗಿ ವಿದ್ಯಾರ್ಥಿನಿ ಈ ಕಟ್ಟುಕತೆಯನ್ನು ಕಟ್ಟಿ, ಬ್ಲೆಡ್ ನಿಂದ ಕೈಗೆ ಗೀರಿ ಕೊಂಡಿದ್ದಳು ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಪೊಲೀಸ್ ಇಲಾಖೆ ಇನ್ನಷ್ಟೇ ಸ್ವಷ್ಟ ಮಾಹಿತಿ ನೀಡಬೇಕಾಗಿದೆ.

Related posts

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya
error: Content is protected !!