25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ ಬಿದ್ದ ಘಟನೆ ಇಂದು(ಫೆ.11) ಮಧ್ಯಾಹ್ನ ನಡೆದಿದೆ.

ಇಲ್ಲಿನ ಮೂರ್ಜೆ ಎಂಬಲ್ಲಿರುವ ಅಬ್ಬಾಸ್ ಎಂಬವರ ಗೇರು ತೋಟದ ಸಮೀಪ ಹಾದುಹೋಗಿರುವ ವಿದ್ಯುತ್ ಲೈನ್ ನಿಂದ ಬೆಂಕಿಯ ಕಿಡಿಗಳು ಸಿಡಿದು ಬೆಂಕಿಯು ತೋಟವನ್ನು ಆವರಿಸಿ 25 ಕ್ಕಿಂತ ಅಧಿಕ ಗೇರು ಮರಗಳು ಸುಟ್ಟುಹೋಗಿವೆ.
ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ತಂಡ, ಬೆಳಾಲು ಎ ವಿಭಾಗದ ಸದಸ್ಯರಾದ ನಾಗೇಶ್ ನೆರಿಯ, ಸ್ನೇಕ್ ಅನಿಲ್ ಕಕ್ಕಿಂಜೆ, ಸ್ಥಳೀಯರಾದ ಶಾಜಿ ಮೋಹನ್, ನಿತಿನ್ ಹಾಗೂ ಮೆಸ್ಕಾಂ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಹೆಚ್ಚಿನ ಪ್ರದೇಶಕ್ಕೆ ಬೆಂಕಿ ಆವರಿಸುವುದನ್ನು ತಡೆದ ಕಾರಣ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿದೆ.

Related posts

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!