25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ತಾಂತ್ರಿಕ ವಿದ್ಯಾಸಂಸ್ಥೆ ಗ್ರಂಥಪಾಲಕರಿಗಾಗಿ ವೃತ್ತಿಪರ ಶಿಕ್ಷಣ ಕಾರ್ಯಾಗಾರ : ಪುಸ್ತಕ ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಸಂಸ್ಥೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ಒಳಪಡುವ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಾಲಾ ಗ್ರಂಥಪಾಲಕರಿಗಾಗಿ ನಿರಂತರ ವೃತ್ತಿಪರ ಶಿಕ್ಷಣ ಕಾರ್ಯಕ್ರಮದಡಿ ಗ್ರಂಥಾಲಯ ನಿರ್ವಹಣೆ ಮತ್ತು ಚಟುವಟಿಕೆ ಆಧಾರಿತ ಸೇವೆಗಳು ಎಂಬ ಶೀರ್ಷಿಕೆಯ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಮಾತನಾಡಿ, ಪುಸ್ತಕಗಳು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗ. ಪ್ರತಿಯೊಂದು ಶಿಕ್ಷಣ ಸಂಸ್ಥೆಗಳು ಶಾಲೆ ಅಥವಾ ಕಾಲೇಜಿನ ಗ್ರಂಥಾಲಯಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಇದರೊಂದಿಗೆ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸುಸಜ್ಜಿತ ವ್ಯವಸ್ಥೆಗಳನ್ನು ಕಲ್ಪಿಸಿಕೊಟ್ಟು ನಿರಂತರವಾದ ಜ್ಞಾನರ್ಜನೆಗೆ ಅನುಕೂಲ ಮಾಡಿಕೊಡಬೇಕು. ಇದು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವುದರ ಜೊತೆಗೆ ಶೈಕ್ಷಣಿಕ ಪ್ರಬುದ್ಧತೆಯನ್ನು ಹೆಚ್ಚಿಸುತ್ತದೆ ಎಂದರು.

ಕಾರ್ಯಾಗಾರವನ್ನು ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ. ಶಶಿಶೇಖರ ಕಾಕತ್ಕರ್ ಉದ್ಘಾಟಿಸಿದರು. ಬಳಿಕ ಮಾತನಾಡಿ, ಪುಸ್ತಕಗಳು ಜ್ಞಾನ ಮತ್ತು ದಾಖಲೆಗಳ ಸಂಪತ್ತು. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಮತ್ತು ವ್ಯಕ್ತಿತ್ವ ವಿಕಾಸನಕ್ಕೆ ಗ್ರಂಥಾಲಯಗಳು ಅತೀ ಮುಖ್ಯ ಎಂದು ಪುಸ್ತಕಗಳ ಮಹತ್ವವನ್ನು ವಿವರಿಸಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಲ್ಲಿ ಗ್ರಂಥಾಲಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ಕಾರ್ಯಾಗಾರವನ್ನು ಎಸ್.ಡಿ.ಎಂ ತಾಂತ್ರಿಕ ವಿದ್ಯಾ ಸಂಸ್ಥೆಯ ಗ್ರಂಥಾಲಯ ಮುಖ್ಯಸ್ಥೆ ಡಾ. ರಜತ ಪಿ. ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಗ್ರಂಥಾಲಯದ ದಾಖಲೆ ನಿರ್ವಹಣೆ, ಪುಸ್ತಕ ಖರೀದಿ ಹಾಗೂ ಚಂದಾದಾರಿಕೆ ಪ್ರಕ್ರಿಯೆಗಳು, ಗ್ರಂಥಾಲಯ ನಿರ್ವಹಣಾ ವಿಧಾನಗಳು ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಸಹಾಯಕವಾಗುವ ಚಟುವಟಿಕೆ ಆಧಾರಿತ ಗ್ರಂಥಾಲಯ ಸೇವೆಗಳ ಕುರಿತು ವಿವರವಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್, ಉಜಿರೆಯ ಎಸ್.ಡಿ.ಎಂ ತಾಂತ್ರಿಕ ವಿದ್ಯಾಲಯದ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕೆ.ಜಿ.ಯಿಂದ 10ನೇ ತರಗತಿಯವರೆಗಿನ ಶಾಲಾ ಮಟ್ಟದ ಪುಸ್ತಕಗಳ ಪ್ರದರ್ಶನವನ್ನೂ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya
error: Content is protected !!