September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮವು ಫೆ.11 ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದುದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಡಿ ವೀರೇಂದ್ರ ಹೆಗ್ಗಡೆಯವರು, “ಇಂದಿನ ಮಕ್ಕಳು ತಂತ್ರಜ್ಞಾನದಲ್ಲಿ ಮುನ್ನಡೆ ಸಾಧಿಸಬೇಕು. ರೊಬೋಟ್‌ಗಳು ಮತ್ತು ಯಂತ್ರಗಳು ಹೊಸ ಕಲಿಕೆಯ ಮಾರ್ಗಗಳನ್ನು ತೆರೆದಿವೆ” ಎಂದು ಹೇಳಿದರು. ಶೈಕ್ಷಣಿಕ ತಂತ್ರಜ್ಞಾನ ಮತ್ತು ಯಂತ್ರೋದ್ಯಮ ಕ್ಷೇತ್ರಗಳಲ್ಲಿ ಮಕ್ಕಳ ಆಸಕ್ತಿಯನ್ನು ಬೆಳೆಸುವ ಅಗತ್ಯತೆಯ ಕುರಿತು ವಿವರಿಸಿದರು.

ಕಾರ್ಯಕ್ರಮದ ವೇಳೆ ಶಿಕ್ಷಕರು ‘ಶ್ರುತಿ’ ರೊಬೋಟ್ ಹೇಗೆ ಕಾರ್ಯನಿರ್ವಹಿಸುತ್ತದೆ, ಅದರ ಉಪಯೋಗಗಳು ಯಾವುವು ಹಾಗೂ ತಂತ್ರಜ್ಞಾನದಿಂದ ಕಲಿಕೆ ಹೇಗೆ ಸುಲಭವಾಗುತ್ತದೆ ಎಂಬ ವಿಷಯಗಳ ಕುರಿತು ಮಕ್ಕಳಿಗೆ ತಿಳಿಸಿದರು.

ವಿದ್ಯಾರ್ಥಿಗಳು ರೊಬೋಟ್‌ಗೆ ನೇರವಾಗಿ ಪ್ರಶ್ನೆಗಳನ್ನು ಕೇಳಿ ಉತ್ತರಗಳನ್ನು ಪಡೆದು ಕುತೂಹಲ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ತಂತ್ರಜ್ಞಾನ ಆಸಕ್ತಿಯನ್ನು ಹೆಚ್ಚಿಸಿದ್ದು, ಹೊಸ ಉತ್ಸಾಹವನ್ನು ಮೂಡಿಸಿದೆ ಎಂದು ಶಾಲಾ ಶಿಕ್ಷಕರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಯು.ಕೆ.ಜಿ.ವಿದ್ಯಾರ್ಥಿ ದಿವಿತ್ ಪಿ‌.‌ಶೆಟ್ಟಿ ರೋಬೋಟ್ ಮಾದರಿ ವೇಷದಲ್ಲಿ ಗಮನಸೆಳೆದರು.

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು ಡಾ.ಸತೀಶ್ಚಂದ್ರ ಎಸ್, ಎಸ್‌.ಕೆ‌.ಡಿ.ಆರ್‌.ಡಿ.ಪಿ ಕಾರ್ಯ ನಿರ್ವಾಹಕ ನಿರ್ದೇಶಕ ಅನಿಲ್‌ ಕುಮಾರ್ ಹಾಗೂ ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಉಪಸ್ಥಿತರಿದ್ದರು.

Related posts

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!