23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಸಹಭಾಗಿತ್ವ ಸೇರಿದಂತೆ ನವದೆಹಲಿಯ ಭಾರತೀಯ ಸಾಮಾಜಿಕ ವಿಜ್ಞಾನ ಸಂಶೋಧನಾ ಮಂಡಳಿ (ICSSR) ಪ್ರಾಯೋಜಕತ್ವದಲ್ಲಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಹಾಗೂ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ ಮಾರ್ಗದರ್ಶನದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ ವಿಚಾರ ಕುರಿತ ಅಂತಾರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ನಡೆಯಿತು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಧರ್ಮಸ್ಥಳ ಶ್ರೀ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ಧನ್ ಮಾತನಾಡಿ, ಚರ್ಚೆ ಮತ್ತು ಸಕಾರಾತ್ಮಕ ನಿರ್ಧಾರಗಳಿಂದ ಮಾತ್ರ ದೇಶ ಕಟ್ಟಲು ಸಾಧ್ಯ. ಗ್ರಾಮೀಣ ಅಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ. ಗ್ರಾಮೀಣ ಭಾರತ ಜಾಗತಿಕ ಮಟ್ಟದಲ್ಲಿ ತೆರೆದುಕೊಂಡರೆ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ಪ್ರಮುಖವಾಗಿ ಯುವಕರು ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಕೊಂಡು, ಬದಲಾವಣೆ ಎಡೆಗೆ ಕಾರ್ಯ ಪ್ರವೃತರಾಗಬೇಕು. ಆಗ ಮಾತ್ರ ಗ್ರಾಮೀಣ ಭಾರತ ಪ್ರಜ್ವಲಿಸಲು ಸಾಧ್ಯವಾಗುತ್ತದೆ ಎಂದರು.

ವಿಚಾರ ಸಂಕಿರಣದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ. ಮಾತನಾಡಿ, ಉಜಿರೆಯ ನಮ್ಮ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಗ್ರಾಮೀಣ ಭಾಗದಲ್ಲಿದ್ದರೂ ಇಲ್ಲಿ ಆಯೋಜಿಸುವ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕೀರಣಗಳಿಗೆ ಅಂತಾರಾಷ್ಟ್ರೀಯ ವಿದ್ವಾಂಸರನ್ನು ಕರೆಸಿ ವಿಚಾರ ವಿನಿಮಯ ಮತ್ತು ಮಾರ್ಗದರ್ಶನವನ್ನು ನೀಡಿಸಲಾಗುತ್ತದೆ ಕಾರಣ ಇಲ್ಲಿನ ವಿದ್ಯಾರ್ಥಿಗಳು ಜಾಗತೀಕವಾಗಿ ತೆರೆದುಕೊಂಡು ಪ್ರಸ್ತುತ ವಿದ್ಯಮಾನಗಳ ಕುರಿತು ಪ್ರಬುದ್ಧತೆಯನ್ನು ಪಡೆದುಕೊಳ್ಳಬೇಕು ಎಂದು. ಇದರ ಭಾಗವಾಗಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಎಸ್.ಡಿ.ಎಂ ಕಾಲೇಜಿನ ವತಿಯಿಂದ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ವಿಚಾರ ಸಂಕಿರಣದಲ್ಲಿ ಭಾಗಿಯಾಗಿದ್ದ ಡೆಲಿಗೇಟ್ಸ್ ಅನಿಸಿಕೆಗಳನ್ನು ಹಂಚಿಕೊಂಡರು.

ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಕಾರ್ಯಕ್ರಮವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ, ಅತಿಥಿಗಳಾಗಿದ್ದ ಅಮೇರಿಕಾದ ಮೆಕ್ಸಿಕೋ ಸಿಟಿಯ ಲ್ಯಾಟಿನ್ ಅಮೆರಿಕನ್ ಫ್ಯಾಕಲ್ಟಿ ಆಫ್ ಸೋಷಿಯಲ್ ಸೈನ್ಸ್ ಪ್ರಾಧ್ಯಾಪಕ ಪ್ರೊ. ಮೇರಿಯಾನೋ ರೋಜಾನ್ ಸಮ್ಮುಖದಲ್ಲಿ ನೆರವೇರಿಸಿದ್ದರು. ಇದೇ ಸಂದರ್ಭದಲ್ಲಿ 35 ಸಂಶೋಧನಾ ಪ್ರಬಂಧಗಳನ್ನು ಒಳಗೊಂಡ ISBN ಪುಸ್ತಕವನ್ನು ಬಿಡುಗಡೆ ಗೊಳಿಸಿದ್ದರು.

ವಿದ್ವಾಂಸರಿಂದ ವಿಚಾರ ಮಂಡನೆ :

ಎರಡು ದಿನದ ವಿಚಾರ ಸಂಕಿರಣದಲ್ಲಿ ಸಭಾ ಕಾರ್ಯಕ್ರಮದ ಬಳಿಕ ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ ವಿಷಯದ ಕುರಿತು ಅಮೇರಿಕಾದ ಮೆಕ್ಸಿಕೋ ಸಿಟಿಯ ಲ್ಯಾಟಿನ್ ಅಮೆರಿಕನ್ ಫ್ಯಾಕಲ್ಟಿ ಆಫ್ ಸೋಷಿಯಲ್ ಸೈನ್ಸ್ ಪ್ರಾಧ್ಯಾಪಕ ಪ್ರೊ. ಮೇರಿಯಾನೋ ರೋಜಾನ್ ಪ್ರಧಾನ ಉಪನ್ಯಾಸ ನೀಡಿದರು. ಸುಸ್ಥಿರ ಗ್ರಾಮೀಣ ಜೀವನೋಪಾಯಕ್ಕಾಗಿ ಡಿಜಿಟಲ್ ಪಾವತಿ ಮತ್ತು ಫಿನ್‌ಟಿಕ್ ಪಾತ್ರ ವಿಷಯದ ಕುರಿತು RBI ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಪಿ. ವಾಸುದೇವನ್ ಹಾಗು ಧರ್ಮಸ್ಥಳ ಎಸ್.ಕೆ.ಡಿ.ಆರ್‌.ಡಿ.ಪಿ ಸಿಇಒ ಅನಿಲ್ ಕುಮಾರ್ ಎಸ್ , ಸುಸ್ಥಿರ ಗ್ರಾಮೀಣ ಅಭಿವೃದ್ಧಿ ಮತ್ತು ಜೀವನೋಪಾಯಕ್ಕಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ ವಿಷಯದ ಕುರಿತು ವಿಜಯಪುರದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತುಹೆಚ್ಚುವರಿ ಡೆಪ್ಯೂಟಿ ಕಮಿಷನರ್ ಡಾ. ಔದ್ರಾಮ, ಭಾರತದಲ್ಲಿ ಗ್ರಾಮೀಣ ಜೀವನೋಪಾಯಕ್ಕಾಗಿ ICT-ಚಾಲಿತ ಪರಿವರ್ತನೆ: ಡಿಜಿಟಲ್ ಅಂತರವನ್ನು ಕಡಿಮೆ ಮಾಡುವ ವಿಷಯ ಕುರಿತು ನವದೆಹಲಿಯ JNUವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ರಮೇಶ್ ಎಸ್. ಸಾಲಿಯನ್, ಸುಸ್ಥಿರ ಗ್ರಾಮೀಣ ಜೀವನೋಪಾಯಕ್ಕಾಗಿ ಸ್ತ್ರೀವಾದಿ ಮಾರ್ಗಗಳು: ಬಿಕ್ಕಟ್ಟಿನ ಸಮಯದಲ್ಲಿ ಮಹಿಳೆಯರು, ಸಾಮಾಜಿಕ ರಕ್ಷಣೆ ಮತ್ತು ಯೋಗ್ಯ ಕೆಲಸ ವಿಷಯದ ಕುರಿತು ಶ್ರೀಲಂಕಾ ದೇಶದ ಬಟ್ಟಿಕಲೋವಾದ ಪ್ರಾಕ್ಟಿಷನರ್ ಮತ್ತು ಅಭಿವೃದ್ಧಿ ಸಲಹೆಗಾರ ನಳಿನಿ ರತ್ನರಾಜ, ಕೃಷಿ ಉದ್ಯಮಶೀಲತೆ ಮತ್ತು ಸುಸ್ಥಿರ ಜೀವನೋಪಾಯ ವಿಷಯದ ಕುರಿತು ಡಾ. ಕಿಶೋರ್ ಕುಮಾರ್ ದಾಸ್, ಅಸಂಘಟಿತ ವಲಯದಲ್ಲಿ ಆರ್ಥಿಕ ಸೇರ್ಪಡೆ ಮತ್ತು ಸಾಮಾಜಿಕ ಭದ್ರತೆ‌ ವಿಷಯದ ಕುರಿತು ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಅಜೀಜುದ್ದೀನ್ ಸುಲ್ತಾನಿ ಅಫ್ಘಾನಿಸ್ತಾನ್, ಭಾರತದಲ್ಲಿ ಆರೋಗ್ಯ ಅರ್ಥಶಾಸ್ತ್ರದ ಸಮಸ್ಯೆಗಳು ವಿಷಯದ ಕುರಿತು ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ನಿವೃತ್ತ ನಿರ್ದೇಶಕ ಪ್ರೊ. ಎಂ. ಜಿ. ಚಂದ್ರಕಾಂತ್, ಫಲಕ ಚರ್ಚೆ ಮತ್ತು ನೀತಿ ಟಿಪ್ಪಣಿಯ ಕುರಿತು ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಪ್ರೊ. ಪ್ರೀತಿ ಕೀರ್ತಿ ಡಿ’ಸೋಜಾ ವಿಚಾರ ಮಂಡನೆ ಮಾಡಿದರು.

ಈ ಸಂದರ್ಭದಲ್ಲಿ ಡಾ. ರಾಜೇಶ್ ಆಚಾರ್ಯ ಎಚ್.. ಸಹ ಪ್ರಾಧ್ಯಾಪಕರು, ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವಿಜಯ್ ಕುಮಾರ್ ಬಿ. ಪಿ.. ಕಾರ್ಯನಿರ್ವಾಹಕ ನಿರ್ದೇಶಕರು, RUDSET ಸಂಸ್ಥೆ ಉಜಿರೆ, ಮನೋರಮಾ ಭಟ್ ಜಿ. ವಿ., ವಕೀಲರು ಮತ್ತು ಮಾಜಿ ನಿರ್ದೇಶಕರು, ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ (ಆರ್) ಉಜಿರೆ,
ಮಲೇಷ್ಯಾದ KRS ಟೂರ್ಸ್ ಅಂಡ್ ಟ್ರಾವೆಲ್ಸ್ ವ್ಯವಸ್ಥಾಪಕ ನಿರ್ದೇಶಕ ಕಿರಣ್ ರೊನಾಡ್, ಬೆಂಗಳೂರಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಶೇಖ್ ಲತೀಫ್ ಚರ್ಚೆಯಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕಾಲೇಜಿನ ಕಾಮರ್ಸ್ ವಿಭಾಗದ ಡೀನ್ ಶಕುಂತಲಾ, ಮುಖ್ಯಸ್ಥೆ ರತ್ನಾವತಿ, ಉಪನ್ಯಾಸಕರು ಮತ್ತು ಕಾರ್ಯಕ್ರಮದ ಸಂಯೋಜಕರಾದ ಗಣರಾಜ್, ಮಹೇಶ್ ಶೆಟ್ಟಿ, ಭಾನು ಪ್ರಕಾಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ದೀಕ್ಷಿತಾ ಕುಮಾರಿ ಮತ್ತು ಸಫೀರ ನಿರೂಪಿಸಿದರು. ಉಪನ್ಯಾಸಕಿ ರತ್ನಾವತಿ ಸ್ವಾಗತಿಸಿದರು. ವಿಭಾಗದ ಡೀನ್ ಶಕುಂತಲಾ ವಂದಿಸಿದರು.

Related posts

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ: ರಥೋತ್ಸವ- ಇಂದು ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
error: Content is protected !!