37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳಿಗಾಗಿ ಬರುವ ಭಕ್ತರಿಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಬಹಳ ಮುಖ್ಯವಾಗಿ ಪಾದಯಾತ್ರಿಗಳ ಆರೋಗ್ಯ ರಕ್ಷಣೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಆರೋಗ್ಯ ಸೇವೆ ನೀಡುತ್ತಿರುವುದು ಅತ್ಯುತ್ತಮ ಸೇವೆಯಾಗಿದೆ ಎಂದು ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯಶೋಧರ ಅವರು ಹೇಳಿದರು.

ಪಾದಯಾತ್ರಿಗಳಿಗೆ ವೈದ್ಯಕೀಯ ಸೇವೆ ನೀಡುವ ಉದ್ದೇಶದಿಂದ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಚಾರ್ಮಾಡಿಯಲ್ಲಿ ಫೆ.11 ರಂದು ತೆರೆಯಲಾದ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ಪಾದಯಾತ್ರಿಗಳಿಗೆ ಶುಭ ಹಾರೈಸಿದರು.


ಮಹಾಶಿವರಾತ್ರಿ ಸಂದರ್ಭದಲ್ಲಿ ಸಾವಿರಾರು ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆಯ ಮೂಲಕ ಬರುತ್ತಿದ್ದು, ಇವರ ಆರೋಗ್ಯ ರಕ್ಷಣೆಗೆ ಅನುಕೂಲವಾಗುವಂತೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಮಾತೃಶ್ರೀ ಅಮ್ಮನವರ ಹಾಗೂ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಆರೋಗ್ಯ ಶಿಬಿರಗಳನ್ನು ತೆರೆಯಲಾಗಿದೆ. ಚಾರ್ಮಾಡಿ, ಮುಂಡಾಜೆ, ಬೂಡುಜಾಲು, ಎಸ್.ಡಿ.ಎಂ ಆಸ್ಪತ್ರೆ, ಎಸ್.ಡಿ.ಎಂ ಡಿ.ಎಡ್ ಕಾಲೇಜು ಬಳಿ, ಹಾಗೂ ಧರ್ಮಸ್ಥಳ ಮುಂತಾದ 6 ಕಡೆಗಳಲ್ಲಿ ಆರೋಗ್ಯ ಶಿಬಿರಗಳನ್ನು ತೆರೆದು, ಅಗತ್ಯವಿರುವ ಔಷಧಿ, ಮುಲಾಮು, ಸ್ಪ್ರೆ ಬ್ಯಾಂಡೇಜ್ ಇತ್ಯಾದಿಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ.

2025ರಲ್ಲಿ 31,874 ಮಂದಿ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ ನೀಡಿದ್ದು, ಇದಕ್ಕಾಗಿ ಸರಿಸುಮಾರು 9.45 ಲಕ್ಷ ರೂಪಾಯಿಯನ್ನು ಹೆಗ್ಗಡೆಯವರ ಆದೇಶದಂತೆ ವಿನಿಯೋಗಿಸಲಾಗಿತ್ತು ಎಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಸಹನ, ನರ್ಸಿಂಗ್ ಅಧೀಕ್ಷಕಿ ಶ್ರೀಮತಿ ಶೆರ್ಲಿ, ಶಿಬಿರದ ಸಂಯೋಜಕ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು. ಜಗನ್ನಾಥ ಎಂ. ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya
error: Content is protected !!