25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ. ಪಂ. ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ, ಆಶ್ರಯದಲ್ಲಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ರಕ್ತ ನಿಧಿ ವಿಭಾಗ,
ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ವಿಭಾಗಗಳು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ,ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ,ಸೇವಾ ಭಾರತಿ (ರಿ). ಕನ್ಯಾಡಿ 2 ವೀರಕೇಸರಿ ಬೆಳ್ತಂಗಡಿ, ಆದಿ ದ್ರಾವಿಡ ಸಮಾಜ ಸೇವಾ ಸಂಘ ಧರ್ಮಸ್ಥಳ. ಶ್ರೀಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು, ಇವರ ಸಹಕಾರದೊಂದಿಗೆ, ಧರ್ಮಸ್ಥಳ ಗ್ರಾಮ್ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ಫೆ.10 ರಂದು ಬೃಹತ್ ರಕ್ತದಾನ ಶಿಬಿರ ನಡೆಯಿತು.

ಶಿಬಿರವನ್ನು ದೀಪ ಬೆಳಗಿಸಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ಚಾಲನೆ ನೀಡಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ ಶ್ರೀನಿವಾಸ್ ರಾವ್ ಮಾತನಾಡಿ ರಕ್ತದಾನ ಶ್ರೇಷ್ಠದಾನ ರಕ್ತದಾನ ಮಾಡುವುದರಿಂದ ಅದೆಷ್ಟೋ ಜೀವವನ್ನು ಉಳಿಸಬಹುದು. ಹೃದಯಾಘಾತದ ಸಂಭವ ಹಾಗೂ ರಕ್ತದಲ್ಲಿ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗುವುದು. ರಕ್ತದಾನ ಮಾಡುವುದರಿಂದ ಆರೋಗ್ಯವಂತ ಜೀವನವನ್ನು ನಡೆಸಬಹುದು. ಗ್ರಾಮ ಪಂಚಾಯತು ಇತರ ಸಂಘ ಸಂಸ್ಥೆಗಳೊಂದಿಗೆ ಸೇರಿಕೊಂಡು ಅತ್ಯುತ್ತಮವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಸಂಚಾಲಕರು ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯ ಸುಧಾಕರ ಗೌಡ ಪೂರ್ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮುರಳಿ ಬಳಿಪ ನೋಟರಿ ವಕೀಲರು, ಶ್ರೀ ಕ್ಷೇತ್ರ ಧರ್ಮಸ್ಥಳ ವಿಭಾಗದಿಂದ ಭುಜಬಳಿ ಧರ್ಮಸ್ಥಳ, ಗ್ರಾಮ ಪಂಚಾಯತ ಸದಸ್ಯರಾದ ಮುರಳಿಧರದಾಸ್, ದಿನೇಶ್ ರಾವ್, ಸುನಿತಾ ಶ್ರೀಧರ್, ಲಕ್ಷ್ಮಿ, ವಸಂತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಿಜನಲ್ ಡೈರೆಕ್ಟರ್ ಜಯರಾಮ್, ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಅಧ್ಯಕ್ಷ ಪ್ರೀತಂ, ಕೆಎಂಸಿ ಆಸ್ಪತ್ರೆ ಮಂಗಳೂರು ವೈದ್ಯಾಧಿಕಾರಿ ಡಾ. ಪ್ರಜ್ವಲ್, ಸೇವಾ ಭಾರತಿ ಕನ್ಯಾಡಿ ಆರೋಗ್ಯ ವಿಭಾಗದ ಸಂಚಾಲಕ ಅಖಿಲೇಶ್ ಶೆಟ್ಟಿ, ಆದಿ ದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ಗಣೇಶ್ ಡಿ ಅಶೋಕನಗರ, ಲಿಯೋ ಕ್ಲಬ್ ಬೆಳ್ತಂಗಡಿ ಇದರ ಕಾರ್ಯದರ್ಶಿ ದೀಕ್ಷಿತ್, ಚಾಮುಂಡೇಶ್ವರಿ ಭಜನಾ ಮಂಡಳಿ ಇದರ ಅಧ್ಯಕ್ಷ ಉಮಾನಾಥ, ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಮಾಜಿ ಪ್ರಾಂತ್ಯ ಅಧ್ಯಕ್ಷ ಲಯನ್ ವಸಂತ ಶೆಟ್ಟಿ ಶ್ರದ್ಧಾ, ಸೇವಾ ಭಾರತಿಯ ಮ್ಯಾನೇಜರ್ ಮೋಹನ್ ಎಸ್, ಶೌರ್ಯ ವಿಪತ್ತು ನಿರ್ವಹಣೆ ತಂಡದ ಅಧ್ಯಕ್ಷರು, ಪದಾಧಿಕಾರಿಗಳು , ಸಂಜೀವಿನಿ ಒಕ್ಕೂಟದ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಸಿಬ್ಬಂದಿ ವರ್ಗ, ಧರ್ಮಸ್ಥಳ ಗ್ರಾಮ್ ಪಂಚಾಯಿತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಸ್ವಾಗತಿಸಿದರು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪ್ರಮೀಳಾ ಧನ್ಯವಾದವಿತ್ತರು. ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಲ್ಮ ಕಾರ್ಯಕ್ರಮ ನಿರೂಪಿಸಿದರು. ಒಟ್ಟು 105 ಯೂನಿಟ್ ರಕ್ತ ಸಂಗ್ರಹವಾಯಿತು.

Related posts

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!