37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಶಾಲಾ ಮಕ್ಕಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಕರೆದುಕೊಂಡು ಹೋದ ಪ್ರಕರಣ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು KA-21-A-8776 ಪಿಕಪ್ ಮತ್ತು KA-70-2596 ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.ಈ ಬಗ್ಗೆ ಮಾಧ್ಯಮಗಳ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಮಂಗಳೂರು ಡಿಡಿಪಿಐ ಶಿಶಿಧರ್.ಜಿ.ಎಸ್ ಅವರು ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಫೆ.12 ರಂದು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಅವರು ಪಿಕಪ್ ವಾಹನ ಚಾಲಕ ಹಾಗೂ ಟಿಪ್ಪರ್ ಚಾಲಕನ ವಿರುದ್ಧ BNS 281,192(A),66 IMV ಅಡಿಯಲ್ಲಿ ಫೆ.12 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya
error: Content is protected !!