37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

ಬೆಳ್ತಂಗಡಿ : ಬಳಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.

ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಬಳಂಜ ಶಾಲೆಗೆ ಭೇಟಿ ನೀಡಿ ವರದಿ ಮಾಡಿಕೊಂಡು ಅ ವರದಿಯನ್ನು ಮಂಗಳೂರು ಡಿಡಿಪಿಐ ಶಶಿಧರ್. ಜಿ.ಎಸ್ ಅವರಿಗೆ ವರದಿ ಸಲ್ಲಿಸಿದ್ದರು. ಬಳಿಕ ಡಿಡಿಪಿಐ ಅವರು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಫೆ.12 ರಂದು ಮಧ್ಯಾಹ್ನ ವೇಳೆಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya
error: Content is protected !!