37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

ನಾರಾವಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ. ೯ ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣಾ ಕಾರ್ಯಕ್ರಮವು ಫೆ.15 ರಂದು ನಡೆಯಲಿದೆ.

ಉದ್ಘಾಟನೆಯನ್ನು ಶ್ರೀ ಸೂರ್ಯನಾರಾಯಣ ದೇವಸ್ಥಾನದ ಮಾಜಿ ಆಡಳಿತ ಮೊಕ್ತಸರರು ನಿರಂಜನ್ ಅಜ್ರಿ ನೆರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು ವಹಿಸಲಿದ್ದಾರೆ. ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಪ್ಪಗಿರಿ ದೀಪ ಪ್ರಜ್ವಲನೆ ಮಾಡಲಿದ್ದರೆ. ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಕೃಷ್ಣ ವಿ. ತಂತ್ರಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಮೂಲ್ಕಿ-ಮೂಡಬಿದ್ರೆ ಶಾಸಕ ಉಮನಾಥ್ ಕೋಟ್ಯಾನ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ ಮಾಜಿ ಆಡಳಿತ ಮೊಕ್ತೇಸರಾದ ವಸಂತ ಭಟ್, ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಸುಧಾಕರ ಭಂಡಾರಿ ಭಾಗವಹಿಸಲಿದ್ದಾರೆ ಎಂದು ನಾರಾವಿಯ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಪೂಜಾರಿ ತಿಳಿಸಿದ್ದಾರೆ.

Related posts

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya
error: Content is protected !!