37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

ಬಳಂಜ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಪಾಠ ಹೇಳಬೇಕಾದ ಶಿಕ್ಷಕರು ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ವಾಹನದಲ್ಲಿ ಕಾನೂನು ಬಾಹಿರವಾಗಿ ವಿಹಾರಕ್ಕೆ ಕರೆದೊಯ್ದ ಘಟನೆ ಬಳಂಜದಲ್ಲಿ ಬೆಳಕಿಗೆ ಬಂದಿದ್ದು ಸ್ಥಳೀಯವಾಗಿ ಚರ್ಚೆಗೆ ಕಾರಣವಾಗಿದೆ.

ಬೆಳ್ತಂಗಡಿ ತಾಲೂಕು ಬಳಂಜ ಗ್ರಾಮದ ಸರಕಾರಿ ಶಾಲೆಯ ಮಕ್ಕಳನ್ನು ವಿಹಾರಕ್ಕೆ ಕರೆದೊಯ್ಯಲು ನಿರ್ಧರಿಸಿದಂತೆ, ಮಕ್ಕಳನ್ನು ವಿಹಾರಕ್ಕೆ ಕರೆದೊಯ್ಯಲು ಒಂದು ಸುರಕ್ಷಿತವಾದ ವಾಹನವನ್ನು ಗೊತ್ತು ಮಾಡುವ ಬದಲಾಗಿ ತೆರೆದ ಪಿಕಪ್ ವಾಹನದಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಪಾಯಕಾರಿಯಾಗಿ ಕರೆದೊಯ್ದಿದ್ದು ಶಿಕ್ಷಕರ ಬೇಜವಾಬ್ದಾರಿ ಮತ್ತು ಅವಿವೇಕಿತನಕ್ಕೆ ಸಾಕ್ಷಿಯಾಗಿದೆ. ಮನರಂಜನೆ, ವಿಹಾರಗಳೆಂದರೆ ಸಹಜವಾಗಿ ಸಂಭ್ರಮಿಸುವ ಮುಗ್ಧ ಮಕ್ಕಳನ್ನು ಟಿಪ್ಪರ್, ಪಿಕಪ್ ನಲ್ಲಿ ವಿಹಾಕ್ಕೆ ಕರೆದುಕೊಂಡು ಹೊದ ಶಿಕ್ಷಕರ ಬೇಜವಾಬ್ದಾರಿಯ ನಡೆಯ ಬಗ್ಗೆ ಪೋಷಕರಿಂದ, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಬಗ್ಗೆ ಆಕ್ರೋಶಗೊಂಡ ಪೋಷಕರು ಈಗಾಗಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಕೂಲಿಕಾರ್ಮಿಕರನ್ನು ಪಿಕಪ್, ಟಿಪ್ಪರ್ ಗಳಲ್ಲಿ ಕೆಲಸಕ್ಕೆ ಕರೆದೊಯ್ದ ಪ್ರಸಂಗಗಳಿಗೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸುವ ಪೊಲೀಸರು, ಬಳಂಜ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪಿಕಪ್, ಟಿಪ್ಪರ್ ಗಳಲ್ಲಿ ಪುಟಾಣಿ ಮಕ್ಕಳನ್ನು ವಿಹಾರಕ್ಕೆ ಕರೆದೊಯ್ದ ಘಟನೆಗೆ ಕಾರಣಕರ್ತರಾದ ಶಿಕ್ಷಕರ ವಿರುದ್ದ ಪೊಲೀಸರು, ಆರ್.ಟಿ.ಒ ಅಥವಾ ಶಿಕ್ಷಣ ಇಲಾಖೆ ಯಾವ ಕ್ರಮಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತಿದ್ದಾರೆ.

Related posts

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!