ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ ೫೦,೦೦೦ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.

ಧರ್ಮಸ್ಥಳದಲ್ಲಿ ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತ ಕಾರ್ಯಾಲಯವನ್ನು ಗುರುವಾರ ಧರ್ಮಾಧಿಕಾರಿಗಳಾದ ಪೂಜ್ಯ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿದರು.


ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಭೋಜನಾಲಯದ ವ್ಯವಸ್ಥಾಪಕರಾದ ಸುಬ್ರಹ್ಮಣ್ಯಪ್ರಸಾದ್, ಕ್ಷೇತ್ರದ ನೌಕರರು, ಯುವತಿ ಮಂಡಲದ ಸದಸ್ಯೆಯರು ಮತ್ತು ಊರಿನ ನಾಗರಿಕರು ಉಪಸ್ಥಿತರಿದ್ದರು.
ಇಲ್ಲಿ ತಂಪುಪಾನೀಯ ಮತ್ತು ಕುಡಿಯುವನೀರಿನ ಸೌಲಭ್ಯ, ಅಂಬುಲೆನ್ಸ್ ಸೇವೆ, ತುರ್ತು ಆರೋಗ್ಯ ಸೇವೆ, ಮಾಹಿತಿ ವಿಭಾಗ, ಪೊಲೀಸ್ ಚೌಕಿಯನ್ನೂ ತೆರೆಯಲಾಗಿದೆ.

ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣಸಂಸ್ಥೆಗಳಲ್ಲಿ ಹಾಗೂ ಧರ್ಮಸ್ಥಳದಲ್ಲಿ ವಸತಿಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಕಡೆ ಸುರಕ್ಷತೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸ್ವಯಂ-ಸೇವಕರು ಪಾದಯಾತ್ರಿಗಳ ಸೇವೆಗೆ ಸಜ್ಜಾಗಿದ್ದಾರೆ.

Related posts

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!