32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಡಂತ್ಯಾರು ಪಾರೆಂಕಿಯ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.12 ರಂದು ಕಡ್ತಿಲ ಎಸ್ಟೇಟ್ ಪಾರೆಂಕಿ ಮಡಂತ್ಯಾರ್ ವಿನಲ್ಲಿ ನಡೆಯಿತು.

ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಸದಸ್ಯರಾದ ನಾರಾಯಣ ಪೂಜಾರಿ ಮಚ್ಚಿನ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿಯ ವಲಯ ಸಂಚಾಲಕ ಪ್ರಮೋದ್ ಮಚ್ಚಿನ, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಪಾರೆಂಕಿ ಇದರ ಅಧ್ಯಕ್ಷ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಮಹಿಳಾ ಬಿಲ್ಲವ ವೇದಿಕೆ ಪಾರೆಂಕಿ ಇದರ ಅಧ್ಯಕ್ಷೆ ಆಶಾ ಉಮೇಶ್ ಕೋಟೆ, ಕಾರ್ಯದರ್ಶಿ ಶ್ರೀಮತಿ ಮಲ್ಲಿಕಾ ಹರಿಚಂದ್ರ ಕೊಡ್ಲಕ್ಕೆ, ಯುವ ಬಿಲ್ಲವ ವೇದಿಕೆ ಪಾರೆಂಕಿ ಇದರ ಅಧ್ಯಕ್ಷ ಸಚಿನ್ ಪೂಜಾರಿ ಅರಂಬುಡ, ಅಶೋಕ್ ಪೂಜಾರಿ, ದಯಾನಂದ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ನಿವೃತ್ತ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ದೋಟ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya
error: Content is protected !!