ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಮಚ್ಚಿನ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಚ್ಚಿನ ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.13 ರಂದು ಸಮುದಾಯ ಭವನ ಮಚ್ಚಿನದಲ್ಲಿ ನಡೆಯಿತು.

ಶ್ರೀ ಗುರು ನಾರಾಯಣ ಸೇವಾ ಸಂಘ ಬೆಳ್ತಂಗಡಿ ಇಲ್ಲಿಯ ನಿರ್ದೇಶಕರು, ಮಚ್ಚಿನ ಬಿಲ್ಲವ ಸಂಘ ದ ಅಧ್ಯಕ್ಷ ಗೋಪಾಲ ಪೂಜಾರಿ ಕೋಲಾಜೆಯವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಸದಸ್ಯ ನಾರಾಯಣ ಪೂಜಾರಿ ಮಚ್ಚಿನ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿಯ ವಲಯ ಸಂಚಾಲಕ ಪ್ರಮೋದ್ ಮಚ್ಚಿನ, ಗೆಜ್ಜೆಗಿರಿ ಗ್ರಾಮ ಸಮಿತಿ ಅಧ್ಯಕ್ಷ ಪುರಂದರ ಕುರುಡಂಗೆ, ಕಾರ್ಯದರ್ಶಿ ಸುಮಿತ್ ಬಳ್ಳಮಂಜ ಉಪಸ್ಥಿತರಿದ್ದರು. ಪ್ರಭಾಕರ ಮುದಲಡ್ಕ, ರಾಜೇಶ್ ಅರಮನೆಗುಡ್ಡೆ, ಸುನಿಲ್ ಕುಮಾರ್ ಕುರುಡಂಗೆ, ಗೋಪಾಲ ಪೂಜಾರಿ ಕೊಡಿಯೇಲ್, ವಸಂತ ಪೂಜಾರಿ ಕುಂಡಡ್ಕ, ಯಶೋಧರ ಕೋಟಿಯನ್, ಸಂಜೀವ ಪೂಜಾರಿ ಕಲ್ಲಿಮಾರ್, ರಮೇಶ ಕೋಡಿಯೇಲ್, ಪರಮೇಶ್ವರ್ ಬಳ್ಳಮಂಜ, ಹಾಗೂ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಮೋದ್ ಕುಮಾರ್ ಸಂಯೋಜಿಸಿ ಗೋಪಾಲ್ ಪೂಜಾರಿ ಕೋಲಾಜೆ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya
error: Content is protected !!