25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ಫೋಕ್ಸೋ ಪ್ರಕರಣದಲ್ಲಿ ಸುಮಾರು ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ ನಡೆದಿದ್ದ ಫೋಕ್ಸೋ ಪ್ರಕರಣದಲ್ಲಿ ಆರೋಪಿ ಬಂಧನವಾದ ಬಳಿಕ ಬಿಡುಗಡೆಯಾಗಿ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಿ, 2015 ರಿಂದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಕವಲಿಗುಡ್ಡೆ ಮನೆಯ ಯೋಗೀಶ್ ಪೂಜಾರಿ(35) ಎಂಬಾತನನ್ನು ವೇಣೂರು ಪೊಲೀಸರು ಫೆ.13 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಾಗನೂರು ಗ್ರಾಮದಲ್ಲಿ ಬಂಧಿಸಿ FTSC-1 (POCSO) ಮಂಗಳೂರು ನ್ಯಾಯಾಧಿಸರ ಮುಂದೆ ಫೆ.14 ರಂದು ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ ಮತ್ತು ವೃತ್ತ ನಿರೀಕ್ಷಕ ರವಿ ಬಿ.ಎಸ್ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ ಢವಗಿ ಮತ್ತು ಓಮನ ರವರ ನೇತೃತ್ವದ ಸಿಬ್ಬಂದಿ ಎಎಸ್ಐ ಬೆಣ್ಣಿಚನ್, ಬಸವರಾಜ ಮತ್ತು ಮೋಹನ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!