25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಪದ್ಮುಂಜ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಫೆ. 14 ರಂದು ನಡೆಯಿತು.

ಮಾರ್ಚ್ 1 ರಿಂದ 6 ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಾರ್ಗದರ್ಶನದೊಂದಿಗೆ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.

ಈ ವೇಳೆ ಶಾಸಕ ಹರೀಶ್ ಪೂಂಜ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಉತ್ಸವದ ರೂಪುರೇಷೆಗಳನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಅನುವಂಶೀಯ ಮೊಕ್ತೇಸರರು ಚಿದಾನಂದ ರಾವ್, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ, ಮೊಗರೋಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತರಾಮ ಮಡಿವಾಳ, ಕಣಿಯೂರು ವಲಯ ಒಕ್ಕೂಟದ ಅಧ್ಯಕ್ಷ ರಮಾನಂದ ಪೂಜಾರಿ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ನಿಕಟಪೂವ ಅಧ್ಯಕ್ಷ ಸೀತರಾಮ, ಆಡಳಿತ ಮಂಡಳಿ ಕಾರ್ಯದರ್ಶಿ ಜಿತೇಶ್ ಜೈನ್ ಅಡೆಂಜ , ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪ್ರಫುಲ್ಲಚಂದ್ರ ಅಡ್ಯಂತಾಯ ಮೊಗರೋಡಿ ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರು ಹರ್ಷ ಮೇಲಾಂಟ ಮೊಗರೋಡಿ , ಆಡಳಿತ ಮಂಡಳಿ ಕೋಶಾಧಿಕಾರಿ ರಕ್ಷಿತ್ ಪಣೆಕ್ಕರ , ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಾರಾಯಣ ಗೌಡ ಮುಚ್ಚೂರು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಮಲೆಂಗಲ್ಲು , ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ರಘುಪತಿ ಭಟ್ ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಧನ್ಯ ಕುಮಾರ್, ಪದ್ಮುಂಜ, ಕೋಶಾಧಿಕಾರಿ ಉದಯ ಕುಮಾರ್ ಮೇಲಾಂಟ, ಪ್ರಧಾನ ಅರ್ಚಕರು ವಿಜಯ ಕುಮಾರ್ ಭಟ್ ,ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!