
ಪಡಂಗಡಿ: ಶ್ರೀ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ಮಹಾಲಿಂಗೇಶ್ವರ ದೇವರಿಗೆ 1008 ಸಿಯಾಳ ಅಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ಜರಗಿತು. ವಿವಿಧ ಭಜನಾ ಮಂಡಳಿಗಳ ಸಹಕಾರದಲ್ಲಿ ಅಹೋರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದೆ.


ಈ ಸಂದರ್ಭದಲ್ಲಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಉದ್ಯಮಿಗಳು ಬರೋಡ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಅಧ್ಯಕ್ಷರಾದ ಅಜಿತ್ ಕುಮಾರ್ ಶೆಟ್ಟಿ ಕೋರ್ಯಾರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಹಾಗೂ ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.











