September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಧರ್ಮಸ್ಥಳ: “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ದೀಪಬೆಳಗಿಸಿ ಚಾಲನೆ ನೀಡಿ ಶುಭ ಹಾರೈಸಿದರು.

ಬಳಿಕ ಎಲ್ಲರೂ ಸಾಮೂಹಿಕವಾಗಿ “ಓಂ ನಮಃ ಶಿವಾಯ” ಪಠಣ ಮಾಡಿದರು.ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿ ಧನ್ಯತೆಯನ್ನು ಹೊಂದಿರುವಿರಿ. ನಿಮ್ಮ ಎಲ್ಲಾ ಕಷ್ಟಗಳನ್ನು ಶಿವನಿಗೆ ಅರ್ಪಿಸಿ, ಸುವಿಚಾರಗಳನ್ನು ಮಾತ್ರ ಕೊಂಡು ಹೋಗಿ. ವಿಷಕಂಠನಾದ ಶಿವನಿಗೆ ಮಾತ್ರ ಹಾಲಾಹಲ ಸ್ವೀಕರಿಸುವ ಸಾಮರ್ಥ್ಯವಿದೆ. ನನಗೆ ಎಂದು ವೈಯಕ್ತಿಕವಾಗಿ ಸುಖಕ್ಕಾಗಿ ಪ್ರಾರ್ಥಿಸುವ ಬದಲು ನಮಗೆ, ಇಡಿ ಸಮಾಜಕ್ಕೆ ಕಲ್ಯಾಣವಾಗಲಿ ಎಂಬ ಪ್ರಾರ್ಥನೆ ನಿಮ್ಮದಾಗಲಿ ಎಂದು ಹೇಳಿ ಅವರು ಶುಭ ಹಾರೈಸಿದರು.ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಮತ್ತು ಮರಿಯಪ್ಪನವರ ನೇತೃತ್ವದಲ್ಲಿ ಏಳು ಮಂದಿಯೊAದಿಗೆ ಪ್ರಾರಂಭವಾದ ಪಾದಯಾತ್ರೆ ಇಂದು ಎಪ್ಪತ್ತು ಸಾವಿರ ಮಂದಿ ಪಾದಯಾತ್ರಿಗಳು ಬೆಂಗಳೂರು ಮತ್ತು ಮೊದಲಾದ ಕಡೆಗಳಿಂದ ಶನಿವಾರ ಧರ್ಮಸ್ಥಳಕ್ಕೆ ಬಂದಿದ್ದರು.ಎಲ್ಲರಿಗೂ ಶ್ರೀ ಸ್ವಾಮಿಯ ದರ್ಶನ, ಸೇವೆಯ ಫಲ ದೊರೆತು ಲೋಕಕಲ್ಯಾಣವಾಗಲಿ ಎಂದು ಹೆಗ್ಗಡೆಯವರು ಹಾರೈಸಿದರು.ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಸುಪ್ರಿಯಾಹರ್ಷೇಂದ್ರಕುಮಾರ್ ಉಪಸ್ಥಿತರಿದ್ದು ಶಿವಪಂಚಾಕ್ಷರಿ ಪಠಣದಲ್ಲಿ ಭಾಗವಹಿಸಿದರು.ಮಾಣಿಲದ ಮೋಹನದಾಸ ಸ್ವಾಮೀಜಿ, ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಸ್ವಾಮೀಜಿ ಮತ್ತು ಮರಿಯಪ್ಪ ಕೂಡಾ ಉಪಸ್ಥಿತರಿದ್ದರು.

ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು. ಅಹೋರಾತ್ರಿ ಶಿವಪಂಚಾಕ್ಷರಿ ಪಠಣ ನಡೆಯಿತು. ಭಕ್ತರು ದೇವರದರ್ಶನ ಮಾಡಿ ವಿಶೇಷವಾಗಿ ಎಳನೀರಿನ ಅಭಿಷೇಕ ಮತ್ತು ಶತರುದ್ರಾಭಿಷೇಕ ಸೇವೆ ಸಲ್ಲಿಸಿ ಧನ್ಯತೆಯನ್ನು ಹೊಂದಿದರು.ದೇವಳ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿರಿದ್ದು ಸಮಾರಂಭದ ಯಶಸ್ವಿಗೆ ಸಹಕರಿಸಿದರು.

Related posts

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೧೮ನೇ ಶಿರ್ತಾಡಿ ಶಾಖೆಯ ಉದ್ಘಾಟನೆ: ಸಂಘ ಬೆಳೆದಂತೆ ಇನ್ನಷ್ಟು ಶಾಖೆಗಳು ತಲೆಎತ್ತಿ ನಿಲ್ಲುವುದಕ್ಕಿದೆ: ಸಂಜೀವ ಪೂಜಾರಿ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya
error: Content is protected !!