37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ವಯೋಸಹಜ ಕಾಯಿಲೆಯಿಂದ ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ಸಂಬಂಧಿಕರು ನದಿಯಲ್ಲಿ ಅಕ್ರಮವಾಗಿ ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ನಾಲ್ಕು ಆಮೆ ಸಮೇತ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ನಗರದ ಸೋಮವತಿ ನದಿಯಲ್ಲಿ ಅಕ್ರಮವಾಗಿ ನಾಲ್ಕು ಆಮೆಯನ್ನು ಬೇಟೆಯಾಡಿ ನದಿ ಬದಿಯಲ್ಲಿ ಮಾಂಸ ಮಾಡಲು ಪ್ರಯತ್ನಿಸುತ್ತಿರುವಾಗ ಫೆ.14 ರಂದು ಸಂಜೆ 3:30 ರ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ದಾಳಿ ಮಾಡಿ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ ನಾಲ್ಕು ಸುಟ್ಟ ಆಮೆಯನ್ನು ಜಪ್ತಿ ಮಾಡಿ ಮುಂದಿನ ತನಿಖೆಗಾಗಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯವರು ಫೆ‌.14 ರಂದು ಸಂಜೆ ಬೆಳ್ತಂಗಡಿ ಪೊಲೀಸರಿಂದ ಮಹಜರು ಮಾಡಿ ನಾಲ್ಕು ಸುಟ್ಟಿರುವ ಆಮೆಗಳು ಮತ್ತು ನಾಲ್ಕು ಮಂದಿ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಅಂಚೆ,ಪೆರ್ಡಲ್ ಗ್ರಾಮದ ನಿರ್ಜಲ್ ನಿವಾಸಿ ಮಣಿಕಂಠ(42), ಮಂಗಳೂರು ನಗರದ ಮುಲ್ಕಿ ತಾಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ(54), ಮೂಡಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಮಕ್ಕಿ ನಿವಾಸಿ ವಿಘ್ನೇಶ್(32), ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ನಿವಾಸಿ ಪ್ರಶಾಂತ್(35) ಎಂಬವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾಲ್ಕು ಮಂದಿ ಆರೋಪಿಗಳಾದ ಮಣಿಕಂಠ, ರಾಜೇಂದ್ರ, ವಿಘ್ನೇಶ್,ಪ್ರಶಾಂತ್ ಇವರು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಂಟಿನಿ ನಿವಾಸಿ ಸಂಬಂಧಿ ಅಜ್ಜಿಯಾದ ದೇವಮ್ಮ ಎಂಬವರ ಉತ್ತರಕ್ರಿಯೆ ಕಾರ್ಯಕ್ರಮಕ್ಕಾಗಿ ಫೆ.13 ರಂದು ಆಗಮಿಸಿದ್ದರು. ಅಜ್ಜಿಯ ಪ್ರೀತಿಯ ಆಮೆ ಪದಾರ್ಥ ಮಾಡಿಕೊಂಡು ಬಂದು ತಿಥಿ ಕಾರ್ಯಕ್ರಮದಲ್ಲಿ ಬಡಿಸಲು ತಯಾರಿ ಮಾಡಲು ಫೆ.14 ರಂದು ಬೆಳ್ತಂಗಡಿಯ ಸೋಮವತಿ ನದಿಗೆ ಬೇಟೆಯಾಡಲು ಆಗಮಿಸಿ ನಾಲ್ಕು ಆಮೆ ಸಮೇತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇವರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್ ನೀಡಿ ಫೆ.14 ರಂದು ರಾತ್ರಿ ಬಿಡುಗಡೆ ಮಾಡಲಾಗಿದೆ.ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮತ್ತು ಬೆಳ್ತಂಗಡಿ ಇನ್ಸ್‌ಪೆಕ್ಟರ್ ಬಿ.ಜಿ.ಸುಬ್ಬಾಪುರ ಮಠ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ಸಿಬ್ಬಂದಿ ಎಎಸ್ಐ ಕುಶಾಲಪ್ಪ, ಹೆಡ್ ಕಾನ್ಟೇಬಲ್ ಪ್ರಮೋದ್, ಪಂಪಾಪತಿ, ಪ್ರಕಾಶ್, ಶ್ವೇತಾ, ಸವಿತಾ ಹಾಗೂ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್, ಡಿ.ಆರ್.ಎಫ್.ಒ ಕಿರಣ್ ಪಾಟೀಲ್, ಸಂದೀಪ್, ಬೀಟ್ ಫಾರೆಸ್ಟರ್ ಪರಶುರಾಮ ಮೇಟಿ, ದಿವಕರ್ ಹಾಗೂ ವಾಹನ ಚಾಲಕ ಕುಶಲಪ್ಪ ಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya
error: Content is protected !!