September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

ನಿಡ್ಲೆ: ಇಲ್ಲಿಯ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ಇವರಿಗೆ ಬೀಳ್ಕೊಡುಗೆ ಸಮಾರಂಭವು ಫೆ.14ರಂದು ನಡೆಯಿತು.

ಈ ವೇಳೆ ಶಾಲೆಯ ವತಿಯಿಂದ ಶಾಂತ ಶೆಟ್ಟಿರವರಿಗೆ ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಂತ ಶೆಟ್ಟಿ ಅವರು ತನ್ನ 32 ವರ್ಷಗಳ ಸೇವಾವಧಿಯ ಅನುಭವಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಅವರ ಒಡನಾಡಿ ಸಹೋದ್ಯೋಗಿಗಳು, ಮಿತ್ರರು, ಬಂಧು ಬಳಗದವರು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಲಕ್ಷ್ಮಣ ಗೌಡ ವಹಿಸಿದ್ದರು. ಹಳೆ ವಿದ್ಯಾರ್ಥಿ ಸೇವಾ ಟ್ರಸ್ಟ್ ನ ಅಧ್ಯಕ್ಷ ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್ , ವೇಣೂರು ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ವೆಂಕಟೇಶ್ ತುಳುಪುಳೆ, ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಎಸ್‌ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲೆಯ ಪ್ರಭಾರವನ್ನು ಸ್ವೀಕರಿಸಿ ಶರತ್ ಕುಮಾರ್ ರವರು ನಿವೃತ್ತರಿಗೆ ಶುಭ ಹಾರೈಸಿ ಮುಂದಿನ ಜವಾಬ್ದಾರಿ ನಿರ್ವಹಣೆಗೆ ಎಲ್ಲರ ಸಹಕಾರ ಕೋರಿದರು.

ಗಿತೇಶ್ ಸ್ವಾಗತಿಸಿದರು. ಶೋಲಿ ವಿ ಜೆ ಕಾರ್ಯಕ್ರಮ ನಿರೂಪಿಸಿದರು. ಎಸ್ಡಿಎಂಸಿ ಯವರು, ಅಡುಗೆ ಸಿಬ್ಬಂದಿಯವರು ಮತ್ತು ಪೋಷಕರು ಸಹಕರಿಸಿದರು.

Related posts

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya
error: Content is protected !!