September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಗರ್ಭಿಣಿ ಸ್ತ್ರಿಯರಿಗೆ ಮಾರ್ಗದರ್ಶನ ಕಾರ್ಯಾಗಾರ

ಉಜಿರೆ: ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಫೆ.15 ರಂದು ಗರ್ಭಿಣಿ ಸ್ತ್ರೀಯರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಾದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರ ಉದ್ಘಾಟಿಸಿದ ಡಾ. ಭಾರತಿ ಇವರು ಇತ್ತೀಚಿನ ದಿನಗಳಲ್ಲಿ ಗರ್ಭಿಣಿ ಸ್ತ್ರೀಯರಿಗೆ ಗರ್ಭಾವಸ್ಥೆಯಲ್ಲಿ ತಮ್ಮ ಶರೀರಲ್ಲಾಗುವ ಬದಲಾವಣೆ ಕುರಿತು ಅನೇಕ ಪ್ರಶ್ನೆಗಳು ಮತ್ತು ಸಂಶಯಗಳು ಬರುತ್ತಿದ್ದು, ಪ್ರತಿಯೊಬ್ಬರಿಗೂ ಪ್ರತ್ಯೇಕವಾಗಿ ವಿವರ ನೀಡುವ ಬದಲು ಪ್ರಾಯೋಗಿಕವಾಗಿ ಒಟ್ಟಿಗೆ ಸೇರಿಸಿ ಮಾಹಿತಿ ನೀಡುವುದರಿಂದ ಎಲ್ಲರಿಗೂ ಪ್ರಯೋಜನವಾದೀತು ಮತ್ತು ಅವರಲ್ಲಿ ಆತ್ಮವಿಶ್ವಾಸ ಹೆಚ್ಚಾದೀತು ಎಂಬ ನೆಲೆಯಲ್ಲಿ ಈ ಕಾರ್ಯಾಗಾರವನ್ನು ಆಯೋಜಿಸಿದ್ದು ಅದರ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಪ್ರಾರಂಭದಲ್ಲಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಹಾಗೂ ಐವಿಎಫ್ ತಜ್ಞೆಯಾದ ಡಾ. ನವ್ಯ ಭಟ್ ರವರು ಗರ್ಭಧಾರಣೆಯಿಂದ ಹೆರಿಗೆ ಆಗುವವರೆಗೆ ಯಾವ ರೀತಿ ಭ್ರೂಣದ ಬೆಳವಣಿಗೆಯಾಗುತ್ತದೆ ಮತ್ತು ತಿಂಗಳವಾರು ವಹಿಸಬೇಕಾದ ಜಾಗ್ರತೆಗಳ ಬಗ್ಗೆ ಪಿಪಿಟಿ ಮೂಲಕ ವಿಸ್ತಾರವಾದ ಮಾಹಿತಿ ಮತ್ತು ಪೌಷ್ಟಿಕ ಆಹಾರವನ್ನು ಸೇವನೆ ಕುರಿತು ಅವರ ಪ್ರಶ್ನೆಗಳಿಗೆ ಮತ್ತು ಸಂಶಯಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿದರು.

ಆಸ್ಪತ್ರೆಯ ಇನ್ನೋರ್ವ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆಯಾದ ಡಾ. ಅಂಕಿತ ಜಿ ಭಟ್ ರವರು ಸಾಮಾನ್ಯ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ (ಸಿಸೇರಿಯನ್) ಮೂಲಕ ಹೆರಿಗೆ ಯಾಕೆ ಮತ್ತು ಯಾವಾಗ ಆಗುತ್ತದೆ ಹಾಗೂ ಹೆರಿಗೆಯ ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ಸಚಿತ್ರಗಳ ಮೂಲಕ ಮನವರಿಕೆ ಮಾಡಿಕೊಟ್ಟರು.

ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ಸೂರಜ್ ಎಸ್ ಶೆಟ್ಟಿ ಅವರು ನವಜಾತ ಶಿಶುವಿನ ಆರೈಕೆ, ಪಾಲನೆ ಪೋಷಣೆ ಬಗ್ಗೆ ಮಾಹಿತಿ ನೀಡಿದರು.

ಫಿಸಿಯೋಥೆರಪಿಸ್ಟ್ ಡಾ.ನಯನ ಭಟ್ ಅವರು ಗರ್ಭಾವಸ್ಥೆಯಲ್ಲಿ ಗರ್ಭಿಣಿ ಸ್ತ್ರೀಯರು ಅನುಸರಿಸಬೇಕಾದ ವ್ಯಾಯಾಮಗಳು, ಶಾರೀರಿಕ ಚಟುವಟಿಕೆಗಳ ಬಗ್ಗೆ ಪ್ರಾತ್ಯಕ್ಷಿಕವಾಗಿ ವಿವರಣೆ ನೀಡಿದರು.

ಕಾರ್ಯಾಗಾರದಲ್ಲಿ ಪಾಲ್ಗೊಂಡ ಎಲ್ಲಾ ಗರ್ಭಿಣಿ ಸ್ತ್ರೀಯರು ಈ ರೀತಿ ಮಾಹಿತಿ ವಿನಿಮಯದ ಕಾರ್ಯಕ್ರಮವನ್ನು ಪ್ರತಿ ತಿಂಗಳು ನಡೆಸಿದರೆ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಹೆರಿಗೆಯೆಂದರೆ ಅದೊಂದು ಪ್ರಕೃತಿ ದತ್ತವಾದ ಕೊಡುಗೆ ಎಂಬುವುದು ನಮ್ಮ ಮನಸ್ಸಿನಲ್ಲಿ ಮೂಡುತ್ತದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು. ಆಸ್ಪತ್ರೆಯ ಪಿ.ಆರ್.ಒ ಎಸ್ ಜಿ ಭಟ್ ಸ್ವಾಗತಿಸಿ ವಂದಿಸಿದರು.

Related posts

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಮುಂದಿನ ತಲೆಮಾರಿನ ಫಾರ್ಮಸಿಸ್ಟ್ ಗಳಿಗೆ ವೃತ್ತಿ ಮಾರ್ಗದರ್ಶನ: ಪ್ರಸನ್ನಾ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಪ್ರೇರಣಾದಾಯಕ ಸೆಮಿನಾರ್

Suddi Udaya
error: Content is protected !!