ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

ಬೆಳ್ತಂಗಡಿ: ಫೆ.17 ರಂದು ಮಂಗಳೂರಿನಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರವರನ್ನು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಹೋಗುವ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಪ್ರಕರಣದ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ, ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಬಾಲಕನ ಪೋಷಕರು ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

ಸಚಿವರು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಅರುಣ್ ಕುಮಾರ್ ರವರನ್ನು ಮತ್ತು ಪಶ್ಚಿಮ ವಲಯದ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ರವರಿಂದ ಎಲ್ಲಾ ತನಿಖಾ ವರದಿಯನ್ನು ಕೇಳಿ ತಿಳಿದುಕೊಂಡರು. ಅರುಣ್ ಕುಮಾರ್ ರವರು ಪ್ರತ್ಯೇಕ ತಂಡ ಇಲ್ಲಿಯವರೆಗೆ ಮಾಡಿರುವ ತನಿಖೆಯ ಪ್ರಗತಿ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಸಚಿವರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸುವುದರ ಬಗ್ಗೆ ನಿರ್ದೇಶನವನ್ನು ನೀಡಿದರು ಮತ್ತು ನೊಂದ ಪೋಷಕರಿಗೆ ಸಾಂತ್ವನ ಕೂಡ ಹೇಳಿದರು.

ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್, ದ.ಕ.ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಹಾಜರಿದ್ದರು.

Related posts

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ರೂ.1.00 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ:ಬೇಡಿಕೆಗೆ ಸ್ಪಂದಿಸಿದ ಶಾಸಕರಿಗೆ ಅಭಿನಂದಿಸಿದ ಗ್ರಾಮಸ್ಥರು

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya
error: Content is protected !!