23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಫೆ.14ರಂದು ಪೂರ್ವ ಪ್ರಾಥಮಿಕ ವಿಭಾಗದ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ(ಹಿರಿಯರ) ದಿನವನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿದ್ದರು. ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ನೃತ್ಯ, ಹಾಡು ಹಾಡುವುದರ ಮೂಲಕ ಎಲ್ಲರನ್ನು ಮನರಂಜಿಸಿದರು. ಅಜ್ಜ-ಅಜ್ಜಿಯಂದಿರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ನಂತರ ಯುಕೆಜಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನವನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ ರವರು, ಸೇಕ್ರೆಡ್ ಹಾರ್ಟ್ ಚರ್ಚಿನ ಉಪಾಧ್ಯಕ್ಷ ನೆಲ್ಸನ್ ಲಸ್ರಾದೋ , ಶಾಲಾ ಮುಖ್ಯೋಪಾಧ್ಯಯರಾದ ವಂ|ಸ್ವಾ| ದೀಪಕ್ ಲೇಯೋ ಡೇಸ , ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಹ ಶಿಕ್ಷಕಿಯರಾದ ಶಾಂತಿ ಲೋಬೊ, ಎಲಿಜಬೆತ್, ಸ್ವೀಟ ಡಿಸೋಜ, ಅನಿತಾ ಫೆರ್ನಾಂಡಿಸ್ ನಿರೂಪಿಸಿ, ಟ್ರೆಸ್ಸಿ ಲೋಬೊ ಸ್ವಾಗತಿಸಿ, ನದಿರ ಫರಾನ್ಹ ಧನ್ಯವಾದವಿತ್ತರು.

Related posts

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya
error: Content is protected !!