March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಿತ್ತಬಾಗಿಲು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಿತ್ತಬಾಗಿಲು ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.14 ರಂದು ನಡೆಯಿತು.

ಮನೆಯ ಯಜಮಾನರಾದ ನೋಣಯ್ಯ ಪೂಜಾರಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಜಾತ್ರೋತ್ಸವಕ್ಕೆ ಶುಭ ಹಾರೈಸಿದರು.


ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿ ಸದಸ್ಯರೂ, ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ನಿತ್ಯಾನಂದ ನಾವರ ಪ್ರಸ್ತಾವಿಕವಾಗಿ ಮಾತನಾಡುತ್ತಾ ಕ್ಷೇತ್ರ ನಡೆದು ಬಂದ ಹಾದಿಯನ್ನು ವಿವರಿಸಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ಗ್ರಾಮದ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು. ಕಾರ್ಯಕ್ರಮದಲ್ಲಿ ಲೋಕೇಶ್ ಪೂಜಾರಿ, ದೇಜಮ್ಮ, ಧರ್ಣಮ್ಮ, ಸುರೇಂದ್ರ ಪೂಜಾರಿ, ವಂದಿತ್ ಮುಂತಾದವರು ಉಪಸ್ಥಿತರಿದ್ದರು. ಲಾಯಿಲ ವಲಯ ಸಂಚಾಲಕರಾದ ಚಂದ್ರಶೇಖರ್ ಇಂದಬೆಟ್ಟು ಕಾರ್ಯಕ್ರಮವನ್ನು ಸಂಯೋಜಿಸಿ ಉಪಸ್ಥಿತರಿದ್ದರು.

Related posts

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya
error: Content is protected !!