37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ) ಇಂದಬೆಟ್ಟು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಇದರ ಸಹಯೋಗದಲ್ಲಿ ಒಂದು ದಿನದ ಜೇನು ಕೃಷಿ ತರಬೇತಿಯನ್ನು ಪಂಚಾಯತ್ ಸಭಾಂಗಣದಲ್ಲಿ ಫೆ.17 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಕಾಶ್ಮೀ ಡಿ. ಶ್ರೀದೇವಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಎಮ್.ಬಿ.ಕೆ, ಎಲ್ ಸಿ ಆರ್ ಪಿ ಕೃಷಿ ಸಖಿ, ಪಶು ಸಖಿ, ಕೃಷಿ ಅಧಿಕಾರಿ ಗಣೇಶ್ ಉಪಸ್ಥಿತರಿದ್ದು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮದ ರೈತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕೃಷಿ ಇಲಾಖೆಯ ಸಹಾಯಕ ನಿರ್ದೆಶಕ ರಮೇಶ್ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿ, ಪ್ರಗತಿಪರ ಕೃಷಿಕ ಪ್ರಭಾಕರ್ ಮಯ್ಯರವರು ಜೇನು ಕೃಷಿ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು. ಹಾಗೂ ಸಾವಯವ ಕೃಷಿ ಬಗ್ಗೆ ಅಡಿಕೆ ಗಿಡ ಅದಕ್ಕೆ ಬರುವ ರೋಗಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಸುಮಾರು 60 ಕ್ಕೂ ಹೆಚ್ಚು ರೈತರು ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮವನ್ನು ಕೃಷಿ ಸಖಿ ಕವಿತಾ ಸ್ವಾಗತಿಸಿ , ಶ್ರುತಿ ಧನ್ಯವಾದವಿತ್ತರು.

Related posts

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
error: Content is protected !!