25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

ಕಡಬ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಪದೆ ಪದೆ ಸಂಚಾರಿ ಸ್ಟುಡಿಯೋ ಯೂಟ್ಯೂಬ್ ಮೂಲಕ ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಪ್ರಸಾರ ಮಾಡಿದ ಪ್ರಕರಣ ಸಂಬಂಧ ನೋಟಿಸ್ ಜಾರಿಯಾಗಿದ್ದರು ಕೂಡ ಮತ್ತೆ ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 30 ದಿನಗಳ ಕಾಲ ಜೈಲು ಶಿಕ್ಷೆ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಸಿಬ್ಬಂದಿ ಜೊತೆಯಲ್ಲಿ ಬೆಂಗಳೂರು ಪೊಲೀಸರು ಫೆ‌.18 ರಂದು ಕಡಬಕ್ಕೆ ಆಗಮಿಸಿ ಸಂತೋಷ್ ನನ್ನು ಆತನ ಶಾಪ್ ನಿಂದ ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ.

ಸಂಜೆ ವೇಳೆಗೆ ಬೆಂಗಳೂರು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿ 30 ದಿನಗಳ ಕಾಲ ಜೈಲಿಗೆ ಕಳುಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ವಕೀಲರಾದ ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು.

Related posts

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya
error: Content is protected !!