25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

ನಾರಾವಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.೯ ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣಾ ಕಾರ್ಯಕ್ರಮವು ಫೆ.೧೫ ರಂದು ನಡೆಯಿತು.


ಶ್ರೀ ಸೂರ್ಯನಾರಾಯಣ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರು ನಿರಂಜನ್ ಅಜ್ರಿ ಉದ್ಘಾಟನೆಯನ್ನು ನೆರವೇರಿಸಿದರು. ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು ಅಧ್ಯಕ್ಷತೆಯನ್ನು ವಹಿಸಿದರು. ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಕೃಷ್ಣ ವಿ. ತಂತ್ರಿ ದೀಪ ಪ್ರಜ್ವಲನೆ ನೆರವೇರಿಸಿದರು.


ಮುಖ್ಯ ಅತಿಥಿಗಳಾಗಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಶ್ರೀ ಸೂರ್ಯನಾರಾಯಣ ದೇವಸ್ಥಾನ ಮಾಜಿ ಆಡಳಿತ ಮೊಕ್ತೇಸರ ವಸಂತ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಹೆಗ್ಡೆ, ಕಾರ್ಯಾಧ್ಯಕ್ಷರಾದ ಜಗದೀಶ್ ಅಂಚನ್, ಮಹಾವೀರ ಜೈನ್, ಡಾ| ಪ್ರಸಾದ್ ಬಿ. ಶೆಟ್ಟಿ ವಿಜಯ ಕ್ಲಿನಿಕ್ ಹೊಸ್ಮಾರು, ಪ್ರದೀಪ್ ಪಾಟಕ್, ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ನಿತ್ಯಾನಂದ ಪೂಜಾರಿ, ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗುರುಸ್ವಾಮಿ ವಿಶ್ವನಾಥ ಪೂಜಾರಿ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಉಪಾಧ್ಯಕ್ಷ ರಾಮಚಂದ್ರ ನಾರಾವಿ, ಪ್ರಧಾನ ಕಾರ್ಯದರ್ಶಿ ಸಂದೀಪ್ ಹಾಗೂ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.


ವಸಂತ ಗುಣನಿಲ ಸ್ವಾಗತಿಸಿದರು. ಜಯ ಪೂಜಾರಿ ಪ್ರಸ್ತಾವಿಸಿದರು. ಸತೀಶ್ ಹೊಸ್ಮಾರು ನಿರೂಪಿಸಿದರು. ಸಮಿತಿ ಪದಾಧಿಕಾರಿಗಳು ಸಹಕರಿಸಿದರು.

Related posts

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!