ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಫೆ.18 ರಂದು ಸಂಜೆ ನಡೆದಿದೆ.

ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಎಂಬಾತನೇ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಬಾಲಕ.
ಅಂಗಳದಲ್ಲಿ ಮಕ್ಖಳಿಬ್ಬರು ಆಟವಾಡುತ್ತಿದ್ದ ವೇಳೆ ಪತ್ತೆಯಾದ ಚೆಂಡಿನಂಥ ವಸ್ತುವೊಂದನ್ನು ಹೆಕ್ಕಿಕೊಂಡು ಬಂದ ಬಾಲಕರಿಬ್ಬರು ಕ್ರಿಕೆಟ್‌ ಆಟವಾಡಿದ್ದಾರೆ. ಏನೂ ಅರಿಯದ ಮುಗ್ಧ ಮಕ್ಕಳು ಇಬ್ಬರು ಬೌಲಿಂಗ್ ಮಾಡಿದ್ದು ಇನ್ನೊಬ್ಬ ಬ್ಯಾಟಿಂಗ್ ಮಾಡಿದ ಸಂದರ್ಭ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬಾಲಕ ಅಭೀಶ್ ಎಂಬಾತ ಗಾಯಗೊಂಡಿದ್ದಾನೆ.
ಗಾಯಗೊಂಡ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ನಾಯಕತ್ವ ತರಬೇತಿ

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!