37.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನಬೆಳ್ತಂಗಡಿವರದಿ

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

ಬೆಳ್ತಂಗಡಿ: ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಬಿಜೆಪಿಯ ಕಾರ್ಯಕರ್ತ ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಭಾರತೀಯ ಜನಸಂಘದ ಹಿರಿಯ ಕಾರ್ಯಕರ್ತ ತೆಂಕಕಜೆಕಾರು, ಬಡಗಕಜೆಕಾರು ಹಾಗೂ ಸರಪಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬಿಜೆಪಿಯ ಆಧಾರಸ್ತಂಭವಾಗಿ ಜನಸಾಮಾನ್ಯರ ನೋವು ನಲಿವುಗಳಿಗೆ ಸದಾ ಸ್ಪಂದಿಸಿ, ಜನಪರವಾದ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡು ಜನನಾಯಕರೆನಿಸಿಕೊಂಡಿದ್ದರು.

ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಜನಪ್ರತಿನಿಧಿಯಾಗಿ, ಸಹಕಾರಿ ಕ್ಷೇತ್ರದಲ್ಲಿಯೂ ಸೈ ಎನಿಸಿಕೊಂಡಿದ್ದ ಹರಿಶ್ಚಂದ್ರ ಪೂಜಾರಿ ಕಜೆಕಾರುರವರು ದೀರ್ಘಕಾಲದ ಅಸೌಖ್ಯದಿಂದ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ, ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಅವರು ಸಂತಾಪ ಸೂಚಿಸಿದ್ದಾರೆ.

ಜೊತೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕ ಎ.ರುಕ್ಷ್ಮಯ ಪೂಜಾರಿ, ಪದ್ಮನಾಭಕೊಟ್ಟಾರಿ,ಬಿ.ನಾಗರಾಜ ಶೆಟ್ಟಿ, ಪ್ರಮುಖರಾದ ತುಂಗಪ್ಪ ಬಂಗೇರ, ಹರಿಕೃಷ್ಣ ಬಂಟ್ವಾಳ, ದೇವದಾಸ್ ಶೆಟ್ಟಿ, ರಾಮದಾಸ್ ಬಂಟ್ವಾಳ, ಚೆನ್ನಪ್ಪ ಆರ್.ಕೋಟ್ಯಾನ್, ಸುಲೋಚನ ಜಿ.ಕೆ.ಭಟ್, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಐರನ್ ರೋಡ್ರಿಗಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!