25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

ಉರುವಾಲು : ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ಫೆ. 20 ರಂದು ದೇವಾಲಯದ ವಠಾರದಲ್ಲಿ ನಡೆಯಿತು.

ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಪ್ರಜ್ವಲಿಸಿದರು.ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಅರುಣ್ ಕುಮಾರ್ ಪುತ್ತಿಲ, ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುದರ್ಶನ್ ಕೊಲ್ಲಿ, ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿಯ ಸದಸ್ಯ ಅಜಿತ್ ಕುಮಾರ್ ಪಾಲೇರಿ, ಬಂಟ್ವಾಳ ಪಿಡಬ್ಲ್ಯೂಡಿ ಗುತ್ತಿಗೆದಾರರ ಅಧ್ಯಕ್ಷ ಶೈಲೇಶ್ ಪೂಜಾರಿ, ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು, ಉರುವಾಲುಪದವು ಮಹಮ್ಮಾಯಿ ದೇವಸ್ಥಾನದ ಅಧ್ಯಕ್ಷ ವಿನೋದ್ ಜಲದುರ್ಗ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ನಾಗಶ್ರೀ ಕೋಡ್ಯಡ್ಕ, ಕಾರ್ಯಾಧ್ಯಕ್ಷ ವಿಜಯ್ ಕುಮಾರ್ ಕಲ್ಲಳಿಕೆ, ಹಸಿರು ಹೊರೆ ಕಾಣಿಕೆ ಸಂಚಾಲಕ ಪ್ರಭಾಕರ್ ಗೌಡ ಪೊಸೊಂದೋಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸುನೀಲ್ ಅಣಾವು ಹಾಗೂ ಲಾಯಿಲ ರಾಘವೇಂದ್ರ ಸೇವಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಸ್ವಾಗತಿಸಿ, ಮಾಧವ ಗೌಡ ಮತ್ತು ಯುವರಾಜ್ ನಿರೂಪಿಸಿದರು.ಬಳಿಕ ಪುರುಷೋತ್ತಮ ಕೊಯಿಲು ಸಾರಥ್ಯದ ಪ್ರಶಸ್ತಿ ವಿಜೇತ ತೆಲಿಕೆದ ಕಲಾವಿದೆರ್ ಕೊಯಿಲ ಅಭಿನಯಿಸುವ ದಿನೇಶ್ ಸಾಲಿಯಾನ್, ಕನಪಾದೆ ರಚಿಸಿ, ನಿರ್ದೇಶಿಸಿರುವ ಗೆಂದಗಿಡಿ ಪಾಡ್ಡನ ಆಧಾರಿತ ಅದ್ದೂರಿ ಕುತೂಹಲಕಾರಿ ನಾಟಕ ನಡೆಯಿತು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya
error: Content is protected !!