September 6, 2026
Uncategorized

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

ಬೆಳ್ತಂಗಡಿ:ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿರುವ ಪ್ರದೇಶದಲ್ಲಿ ಸಂಜೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿಯ ರಭಸದಿಂದ ಬೆಂಕಿ ವೇಗವಾಗಿ ವ್ಯಾಪಿಸುತ್ತಿದೆ.


ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಮಾರ್ಗವಾದ ಚಾರ್ಮಾಡಿ ಘಾಟಿಯ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಶೇಷವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದ ಗುಡ್ಡ ಪ್ರದೇಶದಲ್ಲಿ ಮಲಯಮಾರುತ ಪರಿಸರದಲ್ಲಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಗುಡ್ಡ ಪ್ರದೇಶವಾಗಿರುವುದರಿಂದ ವಾಹನ ಸಂಚಾರ ಹಾಗೂ ಅಗತ್ಯ ಸಲಕರಣೆಗಳ ಬಳಕೆ ಕಷ್ಟಕರವಾಗಿದ್ದು, ಕಾರ್ಯಾಚರಣೆಗೆ ಸವಾಲು ಎದುರಾಗಿದೆ.

Related posts

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

Suddi Udaya

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಬಿ.ಸಿ.ರೋಡು: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!